ತೀರ್ಥಹಳ್ಳಿ : ತಾಲೂಕಿನ ನಿವಾಸಿಯೊಬ್ಬರಲ್ಲಿ ಮಣಿಪಾಲದ ಆಸ್ಪತ್ರೆಯಲ್ಲಿ ಕೆಎಫ್‌ಡಿ ಪಾಸಿಟಿವ್ ಎಂದು ಪತ್ತೆಯಾಗಿದ್ದು, ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ವ್ಯಕ್ತಿಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಉಡುಪಿಯ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ನಡೆಸಿದ ರಕ್ತ ಪರೀಕ್ಷೆಯಲ್ಲಿ ಕೆಎಫ್‌ಡಿ ಪಾಸಿಟಿವ್ ಎಂದು ವರದಿ ಬಂದಿದೆ. ಆದರೆ ಐಡಿಎಲ್ ಪರೀಕ್ಷೆಯಲ್ಲಿ ಕೆಎಫ್‌ಡಿ ನೆಗೆಟಿವ್ ಎಂದು ಬಂದಿದ್ದು ಗೊಂದಲಕ್ಕೆ ಕಾರಣವಾಗಿದೆ.
ಕಂಟ್ರಾಕ್ಟರ್ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಆರೋಗ್ಯದಲ್ಲಿ ಸಮಸ್ಯೆಗಳಿತ್ತು. ಸೋಮವಾರ ಮಣಿಪಾಲದಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಬಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.