ಶಿವಮೊಗ್ಗ: ಉಷಾ ನರ್ಸಿಂಗ್ ಹೋಮ್ ರಸ್ತೆಯ ಅಗಲೀಕರಣ ಹಾಗೂ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ 15ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಮೆಸ್ಕಾಂ ನಗರ ಉಪವಿಭಾಗ–1, ಘಟಕ–2ರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದ್ದು, ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಲ್ಲಿ ರವೀಂದ್ರ ನಗರ, ಗಾಂಧಿನಗರ, ಸವಳಂಗ ರಸ್ತೆ, ಹನುಮಂತ ನಗರ, ವಿನಾಯಕ ನಗರ, ವೆಂಕಟೇಶ ನಗರ, ಎಎನ್ಕೆ ರಸ್ತೆ ಸೇರಿವೆ.
ಇದಲ್ಲದೆ ಉಷಾ ನರ್ಸಿಂಗ್ ಹೋಮ್, ಚಂದ್ರಗಿರಿ ಆಸ್ಪತ್ರೆ, ಸುಶೋಧ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

