SHIVAMOGGA | ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ ಘಟನೆ ನಡೆದಿದೆ.
ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ಪೊಲೀಸ್ ಸಿಬ್ಬಂದಿ ಅರ್ಜುನ್ ಮೇಲೆ ಆರೋಪಿ ರಜಾಕ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆತ್ಮರಕ್ಷಣೆಗಾಗಿ ರೌಡಿಶೀಟರ್ ರಜಾಕ್ ಎಂಬುವನ ಕಾಲಿಗೆ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ಗುಂಡು ಹೊಡೆದು ಬಂಧಿಸಲಾಗಿದೆ.
ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಬಂಧನಕ್ಕೆ ತೆರಳಿದ್ದಾಗ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಈ ಘಟನೆ ನಡೆದಿದ್ದು, ರಜಾಕ್ ಮೇಲೆ ಕೊಲೆ ಯತ್ನ ಸೇರಿ ಐದಾರು ಪ್ರಕರಣಗಳು ದಾಖಲಾಗಿದೆ.
ಕುಗ್ರಾಮದಲ್ಲೊಂದು ಶಾಲೆ, ಒಬ್ಬರೇ ಶಿಕ್ಷಕ, 29 ವರ್ಷ ಸೇವೆ !
ಆರೋಪಿ ರಜಾಕ್ ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.