SHIVAMOGGA | ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಟ್ರಾಫಿಕ್ ಸರ್ಕಲ್‌ನ (Traffic Circle) ಸಿಪಿಐ ಬಿ.ಕೆ.ಲತಾ ಅವರ ನೇತೃತ್ವದಲ್ಲಿಂದು ಶಾಲಾ ವಾಹನಗಳ (School Vehicle’s) ತಪಾಸಣೆ ನಡೆಸಲಾಯಿತು.
Read More :ಸ್ಮಶಾನದಲ್ಲಿ ಕಂಠಪೂರ್ತಿ ಎಣ್ಣೆ ಕುಡಿದ ಇಬ್ಬರು ಸ್ನೇಹಿತರು, ಓರ್ವನನ್ನು ಕೊಚ್ಚಿ ಕೊಂದಿದ್ಯಾಕೆ ?
ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ ದಾಖಲಾತಿಗಳಾದ ಆರ್.ಸಿ. ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಿಮಾ ಪತ್ರ, ಚಾಲನಾ ಪರವಾನಿಗೆ, ಬ್ಯಾಡ್ಜ್ ಹಾಗೂ ಇತರ ದಾಖಲಾತಿಗಳನ್ನು ಮತ್ತು ವಾಹನದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು.

ನಂತರ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡದೇ ಕಡ್ಡಾಯವಾಗಿ ವೇಗದ ಮಿತಿಯಲ್ಲಿಯೇ ವಾಹನಗಳನ್ನು ಚಾಲನೆ ಮಾಡುವಂತೆ ತಿಳಿಸಲಾಯಿತು.
ಚಾಲನೆಯ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ, ವಾಹನಗಳನ್ನು ಓಡಿಸುವಾಗ ಮೊಬೈಲ್ ಫೋನ್ ಬಳಕೆ ಮಾಡದಂತೆ ಮತ್ತು ಶಾಲಾ ವಾಹನದಲ್ಲಿ ಲಭ್ಯವಿರುವ ಆಸನಗಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೂರಿಸಿಕೊಂಡು ಹೋಗದಂತೆ ಸೂಚಿಸಲಾಯಿತು.
Read More :PM Kisan Yojana | ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.