SHIVAMOGGA | ಭಾರಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26 ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.
ತೀರ್ಥಹಳ್ಳಿ :
ಭಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರ್ಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.26 ರ ಶುಕ್ರವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಶೀತ ಗಾಳಿ ಹೆಚ್ಚಾದ ಕಾರಣ ಇಂದು ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.
ಸಾಗರ :
ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜು.26 ರಂದು ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ.
ಹೊಸನಗರ :
ಹೊಸನಗರ ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಜು.26 ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಪಾಲಕರಲ್ಲಿ ವಿನಂತಿಸಲಾಗಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.