ಶಿವಮೊಗ್ಗ ಸುದ್ದಿ

ಪ್ರೀತಿ ನಿರಾಕರಿಸಿದ್ದಕ್ಕೆ ರೋಷ; ಶಿವಮೊಗ್ಗದಲ್ಲಿ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಭಗ್ನಪ್ರೇಮಿ

ಶಿವಮೊಗ್ಗದ ವೆಂಕಟೇಶ ನಗರದಲ್ಲಿ ಯುವತಿಯ ನಿಶ್ಚಿತಾರ್ಥದ ಬಳಿಕ ಆಕ್ರೋಶಗೊಂಡ ಯುವಕನೊಬ್ಬ ಆಕೆಯ ಭಾವಿ ಪತಿ ಹಾಗೂ ಕುಟುಂಬದವರಿಗೆ ಸೇರಿದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಣಿಯನ್ನು ಬಂಧಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ರೋಷ; ಶಿವಮೊಗ್ಗದಲ್ಲಿ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಭಗ್ನಪ್ರೇಮಿ – malnadtimes news

ಶಿವಮೊಗ್ಗ: ಪ್ರೀತಿಸಿದ ಯುವತಿ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಯುವಕನೊಬ್ಬ, ಆಕೆಯ ಭಾವಿ ಪತಿ ಹಾಗೂ ಕುಟುಂಬದವರ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಪೊಲೀಸರ ವಶವಾಗಿದ್ದಾನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಘಟನೆ ಶಿವಮೊಗ್ಗ ನಗರದ ವೆಂಕಟೇಶ ನಗರದ 5ನೇ ಕ್ರಾಸ್‌ನಲ್ಲಿ ನಡೆದಿದೆ. ಮಣಿ ಎಂಬಾತ ವೆಂಕಟೇಶ ನಗರದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಆತ ದುಶ್ಚಟಗಳಿಗೆ ಒಳಗಾಗಿದ್ದ ಕಾರಣ ಯುವತಿ ಆತನಿಂದ ದೂರ ಉಳಿದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಬಳಿಕ ಯುವತಿಯ ಕುಟುಂಬಸ್ಥರು ಆಂಥೋನಿ ರಾಜ್ ಎಂಬುವರೊಂದಿಗೆ ಆಕೆಯ ನಿಶ್ಚಿತಾರ್ಥ ನೆರವೇರಿಸಿದ್ದರು. ಇದರಿಂದ ಆಕ್ರೋಶಗೊಂಡ ಮಣಿ, ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಮಧ್ಯರಾತ್ರಿ ಯುವತಿಯ ಮನೆ ಸಮೀಪಕ್ಕೆ ಬಂದಿದ್ದಾನೆ ಎನ್ನಲಾಗಿದೆ.

ಅಲ್ಲಿ ನಿಲ್ಲಿಸಲಾಗಿದ್ದ ಆಂಥೋನಿ ರಾಜ್ ಹಾಗೂ ಯುವತಿಯ ತಮ್ಮನಿಗೆ ಸೇರಿದ ಎರಡು ಪಲ್ಸರ್ ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಕೃತ್ಯದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆ ಬಳಿಕ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಟುಂಬಕ್ಕೆ ತೊಂದರೆ ನೀಡಲು ಯತ್ನಿಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650