ಶಿವಮೊಗ್ಗ

ಶಿವಮೊಗ್ಗ ಪಿಡಿಒ ದಂಪತಿ ಮನೆಯಲ್ಲಿ ಕಳ್ಳತನ ಪ್ರಕರಣ ; ಆರೋಪಿ ಬಂಧನ, ₹1.02 ಕೋಟಿ ಮೌಲ್ಯದ ಸ್ವತ್ತು ವಶ

ಶಿವಮೊಗ್ಗದ ವಿದ್ಯಾನಗರದಲ್ಲಿ ಪಿಡಿಒ ದಂಪತಿ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದೆ. 558.099 ಗ್ರಾಂ ಚಿನ್ನಾಭರಣ, ₹20 ಲಕ್ಷ ನಗದು ಸೇರಿ ₹1.02 ಕೋಟಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ಪಿಡಿಒ ದಂಪತಿ ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ, ₹1.02 ಕೋಟಿ ಮೌಲ್ಯದ ಸ್ವತ್ತು ವಶ – police

ಶಿವಮೊಗ್ಗ: ವಿದ್ಯಾನಗರದ ಪಿಡಿಒ ದಂಪತಿ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕೋಟೆ ಠಾಣೆ ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಚಿನ್ನಾಭರಣ, ನಗದು ಸೇರಿದಂತೆ ₹1,02,77,435 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಹಗರಿಬೊಮ್ಮನಹಳ್ಳಿ ಮೂಲದ ಮೊಹಮ್ಮದ್ ರಫೀಕ್ ಅಲಿಯಾಸ್ ಕರಿಯ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

558 ಗ್ರಾಂ ಚಿನ್ನಾಭರಣ, ₹20 ಲಕ್ಷ ನಗದು ವಶ

ವಿದ್ಯಾನಗರದಲ್ಲಿರುವ ಪಿಡಿಒ ದಂಪತಿಯ ಮನೆಯಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಬಂಧಿತ ಆರೋಪಿಯಿಂದ ವಶಪಡಿಸಿಕೊಂಡ ಸ್ವತ್ತುಗಳಲ್ಲಿ ₹80.92 ಲಕ್ಷ  ಮೌಲ್ಯದ 558.099 ಗ್ರಾಂ ಚಿನ್ನಾಭರಣ, ₹20 ಲಕ್ಷ ನಗದು ಹಾಗೂ ₹1.85 ಲಕ್ಷ ಮೌಲ್ಯದ ಇತರೆ ವಸ್ತುಗಳು ಸೇರಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಶೇಷ ತಂಡದಿಂದ ತನಿಖೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರ ನಿರ್ದೇಶನದಂತೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾರಿಯಪ್ಪ ಹಾಗೂ ಡಿವೈಎಸ್‌ಪಿ ಶೀಲವಂತ ಹೊಸಮನಿ ಅವರ ನೇತೃತ್ವದಲ್ಲಿ ಕೋಟೆ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಹರೀಶ ಕೆ. ಪಟೇಲ್, ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಠಾಣೆಯ  ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯರನ್ನು ಬಂಧಿಸಿದ್ದಾರೆ.

ಪ್ರಕರಣವನ್ನು ಭೇದಿಸಿ ಕಳವು ಸ್ವತ್ತುಗಳನ್ನು ವಶಪಡಿಸಿಕೊಂಡ ತನಿಖಾ ತಂಡಕ್ಕೆ ಎಸ್‌ಪಿ ನಿಖಿಲ್ ಬಿ. ಅಭಿನಂದನೆ ಸಲ್ಲಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!