ಶಿವಮೊಗ್ಗ

ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ

ಶಿವಮೊಗ್ಗದ ವಿದ್ಯಾನಗರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ಕಾಮಗಾರಿಯ ಗುಣಮಟ್ಟ ಕಾಪಾಡಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ – channi

ಶಿವಮೊಗ್ಗ: ನಗರದ ವಿದ್ಯಾನಗರ ಬಡಾವಣೆಯಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಗುದ್ದಲಿ ಪೂಜೆ ನೆರವೇರಿಸಿದರು.

WhatsApp Group Join Now
Telegram Group Join Now
Instagram Group Join Now

ವಿದ್ಯಾನಗರ ಭಾಗದ ನಿವಾಸಿಗಳ ಬೇಡಿಕೆಯನ್ನು ಪರಿಗಣಿಸಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿಯ ಗುಣಮಟ್ಟದ ಬಗ್ಗೆ ವಿಶೇಷ ಗಮನ ಹರಿಸಬೇಕು. ಸಂಬಂಧಪಟ್ಟ ಇಂಜಿನಿಯರ್‌ಗಳು ಸ್ಥಳದಲ್ಲೇ ಹಾಜರಿದ್ದು ಕಾಮಗಾರಿಯನ್ನು ನಿರಂತರವಾಗಿ ಪರಿಶೀಲಿಸಬೇಕು ಎಂದು ಹೇಳಿದರು.

ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸೂಚನೆ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!