SHIVAMOGGA | ಶಿವಮೊಗ್ಗ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (Flight) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ.

ಇಂದು ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಆಗಮಿಸುತ್ತಿದ್ದ ಗೃಹ ಸಚಿವ ಪರಮೇಶ್ವರ್ ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗದೆ ಬೆಂಗಳೂರಿಗೆ ವಿಮಾನ ಹಿಂತಿರುಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.