ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ರಿಶಿ ಆನಂದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಇಲ್ಲಿಯವರೆಗೆ ಶಿವಮೊಗ್ಗ ಜಿ.ಪಂ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಎನ್. ಹೇಮಂತ್ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ – HESCOM) ವ್ಯವಸ್ಥಾಪಕ ನಿರ್ದೇಶಕರನ್ನಾಗಿ (MD) ವರ್ಗಾವಣೆ ಮಾಡಲಾಗಿದೆ.
ಹೇಮಂತ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಸ್ಥಾನಕ್ಕೆ ರಿಶಿ ಆನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

