Ripponpete

ಸ್ನಾತಕೋತ್ತರ ಪದವಿಯೊಂದಿಗೆ ಎರಡು ಚಿನ್ನದ ಪದಕ ಪಡೆದ ಶೋಭಾ ಬಿ.ಎಸ್.

ರಿಪ್ಪನ್‌ಪೇಟೆ ; ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೋಭಾ ಬಿ.ಎಸ್. ಕೋಂ ರಾಜೇಂದ್ರ ಜಿ.ಪಿ. ಗಿಳಾಲಗುಂಡಿ ಅವರಿಗೆ ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ ನೀಡಿ ಗೌರವಿಸಿದೆ.

WhatsApp Group Join Now
Telegram Group Join Now
Instagram Group Join Now

ಶೋಭಾ ಬಿ.ಎಸ್. ಪ್ರಸ್ತುತ ಮುರುಘಾಮಠ ಎಸ್.ಜೆ.ಜಿ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರ ಈ ಸಾಧನೆಗೆ ಆನಂದಪುರ ಮುರುಘಾಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಅಭಿನಂದಿಸಿ ಶುಭಾಶೀರ್ವಾದ ನೀಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!