ರಿಪ್ಪನ್‌ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೆಂಗಳೂರು ಉತ್ತರ ವಲಯದ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬಡ್ಡಿಗೆ ಆಯ್ಕೆಯಾಗಿ ಕರ್ನಾಟಕ ತಂಡವನ್ನು 4ನೇ ಬಾರಿ ಪ್ರತಿನಿಧಿಸಲಿದ್ದಾರೆ.

ಪಟ್ಟಣದ ಶಬರೀಶ ನಗರದ ನಿವಾಸಿಗಳಾದ ರಾಘವೇಂದ್ರ ಬಿ.ಎಸ್ ಮತ್ತು ಸವಿತಾ ದಂಪತಿಯ ಪುತ್ರಿಯಾದ ಶ್ರೇಯಾ, ರಾಮಕೃಷ್ಣ ವಿದ್ಯಾಲಯದಲ್ಲಿ 10ನೇ ತರಗತಿಯ ವ್ಯಾಸಂಗ ಮಾಡುತ್ತಿದ್ದಾರೆ.

ಅಪ್ರತಿಮ ಸಾಧನೆಯ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಈ ಯುವ ಪ್ರತಿಭೆಗೆ ಶ್ರೀ ರಾಮಕೃಷ್ಣ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕ ವಿನಯ್ ಎಂ ಹಾಗೂ ಸಾರ್ವಜನಿಕರು ಆಭಿನಂದಿಸಿ ಶುಭ ಹಾರೈಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





