Accident

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ – accident

ಶಿವಮೊಗ್ಗ, ಆಗಸ್ಟ್ 7: ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಚೋರಡಿ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಆರು ಮಂದಿ ಒಂದೇ ಕಾರಿನಲ್ಲಿ ಬೆಂಗಳೂರಿನಿಂದ ಸಿಗಂದೂರು ಕಡೆ ಪ್ರಯಾಣಿಸುತ್ತಿದ್ದರು. ಚೋರಡಿ ಬ್ರಿಡ್ಜ್ ಸಮೀಪ ರಸ್ತೆ ಬದಿಯ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ, ನಿಯಂತ್ರಣ ಕಳೆದುಕೊಂಡು ಮೂರು ಬಾರಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಸಾಗರ ಪೇಟೆ ಠಾಣೆ ಪೊಲೀಸರಿಗೆ ತಪ್ಪಿದ ಅಪಾಯ

ಇದೇ ವೇಳೆ ಕರ್ತವ್ಯದ ನಿಮಿತ್ತ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಸಾಗರ ಪೇಟೆ ಠಾಣೆ ಪೊಲೀಸ್ ಸಿಬ್ಬಂದಿಯ ವಾಹನ ಇದೇ ಮಾರ್ಗದಲ್ಲಿ ಸಾಗುತ್ತಿತ್ತು.

ಅಪಘಾತ ಸಂಭವಿಸಿದ ಸ್ಥಳಕ್ಕೆ ಒಂದೆರಡು ನಿಮಿಷ ಮುಂಚಿತವಾಗಿ ತಲುಪಿದ್ದರೆ, ಪಲ್ಟಿಯಾದ ಕಾರು ತಮ್ಮ ವಾಹನಕ್ಕೂ ಡಿಕ್ಕಿ ಹೊಡೆಯುವ ಸಾಧ್ಯತೆ ಇತ್ತು ಎಂದು ಎಎಸ್‌ಐ ಮೀರಾಬಾಯಿ ತಿಳಿಸಿದ್ದಾರೆ.

ಗಾಯಾಳುಗಳ ನೆರವಿಗೆ ಧಾವಿಸಿದ ಪೊಲೀಸರು

ಅಪಘಾತದ ಬಳಿಕ ಕಾರಿನಲ್ಲಿದ್ದವರು ನೆರವಿಗಾಗಿ ಕೂಗಿಕೊಂಡಿದ್ದು, ಎಎಸ್‌ಐ ಮೀರಾಬಾಯಿ ಹಾಗೂ ಜೊತೆಗಿದ್ದ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕಿಳಿದು ಗಾಯಾಳುಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ.

ಬಳಿಕ ಗಾಯಾಳುಗಳನ್ನು ಇನೋವಾ ವಾಹನ ಹಾಗೂ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ವಕೀಲರೂ ಇದ್ದರು ಎನ್ನಲಾಗಿದೆ.

ಇಬ್ಬರ ಸ್ಥಿತಿ ಗಂಭೀರ

ಒಟ್ಟು ಆರು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಉಳಿದ ನಾಲ್ವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650