ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು

Written by Koushik G K

Published on:

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಗರ ನಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೃಹತ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಷಿ, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದು, ಹತ್ತು ಸಾವಿರಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಎನ್ನಲಾಗಿದೆ.

ಹೊಳೇಬಾಗಿಲು ಬಳಿ ನಿರ್ಮಾಣವಾಗಿರುವ ಈ ಸೇತುವೆ ಮಲೆನಾಡಿನ ಅಭಿವೃದ್ಧಿಗೆ ನಾಂದಿ ಹಾಡಲಿದ್ದು, ಇದರಿಂದ ಸಿಗಂದೂರು ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಸುಗಮ ಸಂಪರ್ಕ ದೊರೆಯಲಿದೆ. ಆರು ದಶಕಗಳ ಕನಸು ಈಡೇರಲಿರುವ ಈ ಸಂದರ್ಭ, ಸ್ಥಳೀಯರು ಭಾವನಾತ್ಮಕವಾಗಿ ಪಾಲ್ಗೊಳ್ಳಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಕಾರ್ಯಕ್ರಮ ವಿವರಗಳು:

  • ಬೆಳಿಗ್ಗೆ 10:30 – ನಿತಿನ್ ಗಡ್ಕರಿ ಅವರಿಂದ ಸೇತುವೆ ಲೋಕಾರ್ಪಣೆ
  • 11:00 – ಸಿಗಂದೂರು ದೇವಿಗೆ ವಿಶೇಷ ಪೂಜೆ
  • ಮಧ್ಯಾಹ್ನ 12:00 – ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ

ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲರನ್ನು ಆಹ್ವಾನಿಸಲಾಗಿದೆ.

Leave a Comment