ಹೊಸನಗರ ; ಅಕ್ರಮವಾಗಿ ಮರಳು ಸಂಗ್ರಹ ಮತ್ತು ಸಾಗಾಟದ ವಿರುದ್ಧ ಜೂ.16 ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತವಾದ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಹೊಸನಗರ ಜನಸಂಗ್ರಾಮ ಪರಿಷತ್ತಿನ ಗಿರೀಶ್ ಆಚಾರ್ ತಿಳಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ಶರಾವತಿ ನದಿಯಿಂದ ಅಕ್ರಮವಾಗಿ ನೂರಾರು ಲೋಡ್ ಮರಳು ಸಂಗ್ರಹ ಮತ್ತು ಸಾಗಾಟ ನಡೆಯುತ್ತಿರುವ ಬಗ್ಗೆ ಸಾಕಷ್ಟು ಬಾರಿ ಇಲ್ಲಿನ ತಾಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಪಶ್ಚಿಮ ಘಟ್ಟ ಹಾಳಾಗುವುದಲ್ಲದೆ ನದಿ ಮೂಲ ಹಾಳಾಗುತ್ತಿದೆ ಹಾಗು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳು ನಷ್ಟವಾಗುತ್ತಿದೆ. ಇದರ ವಿರುದ್ಧ ಜೂ. 16 ರಂದು ಬೆಳಗ್ಗೆ 10:30 ರಿಂದ ಡಿಸಿ ಕಚೇರಿ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸುವುದಾಗಿ ಗಿರೀಶ್ ಆಚಾರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
రంగుతోన్న జిల్ల~ నిరింగర రఘర్రియ ముంబాగ చరాంగియాగి చితాన శ్రీరిభతని తండుదారి నిర్ణయినీస్టు కాత్రుగరు నాన్న మంత రియంవాది శ్రీతిభ బసిని నాడతీలిచే బాలేది అవండి
2008

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.