ರಿಪ್ಪನ್‌ಪೇಟೆ ; ಮೇರಿಮಾತಾ ಪ್ರೌಢ ಶಾಲೆಗೆ ಬೆಳ್ಳಿ ಹಬ್ಬದ ಸಂಭ್ರಮ | ಪ್ರತಿಭೆಗೆ ಜಾತಿ, ಧರ್ಮ ಬೇಧವಿಲ್ಲ ; ಬಿಇಒ ಕೃಷ್ಣಮೂರ್ತಿ ಹೆಚ್.ಆರ್.

Written by malnadtimes.com

Published on:

RIPPONPETE ; ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅತ್ಯುತ್ತಮವಾದ ಪ್ರತಿಭೆಯನ್ನು ಹೊಂದಿರುತ್ತಾರೆ. ಪ್ರತಿಭೆಗೆ ಜಾತಿ ಧರ್ಮ ಬೇಧವಿಲ್ಲ, ಶಿಕ್ಷಕರು ಹಾಗೂ ಪೋಷಕರು ಅವರಿಗೆ ಅವಕಾಶಗಳನ್ನು ನೀಡುವುದರ ಮೂಲಕ ಪ್ರತಿಭೆಗಳಿಗೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಯಶಸ್ಸು ಗಳಿಸಲು ಪ್ರೇರಣೆ ನೀಡಬೇಕು ಎಂದು ಹೊಸನಗರ ತಾಲೂಕಿನ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಮೇರಿಮಾತಾ ಪ್ರೌಢಶಾಲೆಯ ಬೆಳ್ಳಿ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನಲ್ಲಿ ಪ್ರತಿಭೆಗಳಿಗೇನು ಕೊರತೆ ಇಲ್ಲ. ಮೇರಿಮಾತಾ ಪ್ರೌಢಶಾಲೆ ನಡೆದು ಬಂದ ದಾರಿಯನ್ನು ಹತ್ತಿರದಿಂದ ನೋಡಿದ್ದೇನೆ ಎಂದು ಶಾಲೆಯ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೇರಿಮಾತಾ ಪ್ರೌಢ ಶಾಲೆಗೆ 25 ವರ್ಷದ ಬೆಳ್ಳಿ ಹಬ್ಬ ತನ್ನ ಪ್ರಖರತೆಯನ್ನು ಹೆಚ್ಚು ಮಾಡುತ್ತಾ ವಿದ್ಯಾರ್ಥಿಗಳನ್ನು ತನ್ನತ್ತ ಸೆಳೆಯುವಂತಾಗಿದೆ. ಎಲ್ಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಇಲಾಖೆಯ ಪರವಾಗಿ ಅಭಿನಂದಿಸುತ್ತೇನೆ ಎಂದು ಶಾಲೆಯ ಕಾರ್ಯವೈಖರಿಯ ಬಗ್ಗೆ ಹೇಳಿದರು.

ಹೊಸನಗರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ ರಾವ್ ಕೆ. ಬಿ.ಮಾತನಾಡಿ, ತಾಲೂಕಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಿಡಾ ಚಟುವಟಿಕೆಯಲ್ಲೂ ಆಸಕ್ತಿಯನ್ನು ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಲೋಕದಲ್ಲಿ ಸಾಧನೆಯನ್ನು ಮಾಡಿದ್ದಾರೆ. ಹಾಗೆಯೇ ಮೇರಿ ಮಾತಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯಮಟ್ಟದಲ್ಲಿ ಸಾಧನೆಯನ್ನ ಮಾಡಿದ್ದಾರೆ ಇದು ನಮ್ಮ ಇಲಾಖೆಗೆ ಸಂತಸದ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದರ್ ಲಿಸಾ ಮೇರಿ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಗ್ರೇಸ್ಲಿನ್ ಶಾಲಾ ಸಲಹಾ ಸಮಿತಿ ಅಧ್ಯಕ್ಷ, ಅಲೆಕ್ಸ್ ಜಾರ್ಜ್, ಸಬಾಸ್ಟಿನ್ ಮ್ಯಾಥ್ಯೂಸ್‌, ಶಿಕ್ಷಣ ಇಲಾಖೆಯ ಮಂಜುನಾಥ್ ಎನ್., ಮಹೇಶ್ ಶಾಲಾ ಸಲಹಾ ಸಮಿತಿ ಸದಸ್ಯರು, ಶಿಕ್ಷಕರು ಇದ್ದರು.

Leave a Comment