Shivamogga News

ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅಮಾನತು: ಸರ್ಕಾರದಿಂದ ಆದೇಶ

ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಅಮಾನತು: ಸರ್ಕಾರದಿಂದ ಆದೇಶ – d virupaksha

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ವಿ. ಅವರನ್ನು ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಲಾಗಿದೆ ಎಂಬ ಆರೋಪ ಡಾ. ವಿರೂಪಾಕ್ಷಪ್ಪ ಅವರ ಮೇಲಿತ್ತು.

ಸಂಸ್ಥೆಯಲ್ಲಿ ಇತರ ಮೂವರು ಕ್ಯಾನ್ಸರ್ ಶಸ್ತ್ರಚಿಕಿತ್ಸಕರು ಲಭ್ಯವಿದ್ದರೂ, ಡಾ. ಅಶ್ವಿನ್ ಹೆಬ್ಬಾರ್ ಒಬ್ಬರೇ ಲಭ್ಯವಿದ್ದಾರೆ ಎಂಬ ರೀತಿಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ನಿರ್ದೇಶಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು.

ನ್ಯಾಯಾಲಯದ ನಿರ್ದೇಶನದ ಹಿನ್ನೆಲೆಯಲ್ಲಿ ಸಿಸಿಎ ನಿಯಮಾವಳಿಗಳಡಿ ಸರ್ಕಾರ ಅಮಾನತು ಆದೇಶ ಹೊರಡಿಸಿದೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಿಮ್ಸ್ ನಿರ್ದೇಶಕರ ಹುದ್ದೆ ತೆರವಾಗಿರುವ ಹಿನ್ನೆಲೆಯಲ್ಲಿ, ಸಿಮ್ಸ್ ಪ್ರಾಂಶುಪಾಲರಾದ ಡಾ. ರಮೇಶ್ ಬಾಬು ಕೆ. ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರಕರಣವು ಸಿಮ್ಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಇಲಾಖಾ ವಿಚಾರಣೆಯತ್ತ ಗಮನ ಹರಿದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650