ಹೊಸನಗರ

ತಮಿಳಿನ ‘ಸೂಪರ್ ಸಿಂಗರ್’ ವೇದಿಕೆಯಲ್ಲಿ ಮಿಂಚಲು ಸಜ್ಜಾದ ಹೊಸನಗರದ ಈ ಯುವ ಗಾಯಕ ಯಾರು ಗೊತ್ತಾ?

ತಮಿಳು ಕಿರುತೆರೆಯ ಅತ್ಯಂತ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸೂಪರ್ ಸಿಂಗರ್’ ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದ ಯುವ ಗಾಯಕ ಅಭಿಜಿತ್ ರಾವ್ ತಮ್ಮ ಗಾಯನ ಪ್ರತಿಭೆ ಪ್ರದರ್ಶಿಸಲು ಆಯ್ಕೆಯಾಗಿದ್ದಾರೆ.

Abhijith Rao

ಹೊಸನಗರ: ತಮಿಳು ಕಿರುತೆರೆಯ ಅತ್ಯಂತ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸೂಪರ್ ಸಿಂಗರ್’ ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರದ ಯುವ ಗಾಯಕ ಅಭಿಜಿತ್ ರಾವ್ ತಮ್ಮ ಗಾಯನ ಪ್ರತಿಭೆ ಪ್ರದರ್ಶಿಸಲು ಆಯ್ಕೆಯಾಗಿದ್ದಾರೆ. ನವೆಂಬರ್ 21ರಿಂದ ಸ್ಟಾರ್ ವಿಜಯ್ ಟಿವಿಯಲ್ಲಿ ಈ ಕಾರ್ಯಕ್ರಮವು ಪ್ರಸಾರವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಖ್ಯಾತ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರ ಚೆನ್ನೈನ ‘ಕೆ.ಎಂ. ಮ್ಯೂಸಿಕ್ ಕನ್ಸರ್ವೇಟರಿ’ಯಲ್ಲಿ ಸಂಗೀತ ಅಭ್ಯಾಸ ಮಾಡಿರುವ ಅಭಿಜಿತ್, ಈಗಾಗಲೇ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಕಂಗುವಾ’, ‘ಲವ್ ಸ್ಟೋರಿ’ ಸೇರಿದಂತೆ ಹಲವು ಸಿನಿಮಾಗಳಿಗೆ ಹಿನ್ನೆಲೆ ಗಾಯಕರಾಗಿ ಧ್ವನಿ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

ಚಲನಚಿತ್ರ ಗಾಯನದ ಜೊತೆಗೆ ‘ಸೋನಿಕ್ಸ್ ರೂಟ್ಸ್’ (Sonix Roots) ತಂಡದ ಮೂಲಕವೂ ಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ, ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ.

ಅಭಿಜಿತ್ ರಾವ್ ಅವರು ಹೊಸನಗರದ ಸಾಮಾಜಿಕ ಕಾರ್ಯಕರ್ತ ಎನ್.ಆರ್. ದೇವಾನಂದ್ ಮತ್ತು ಶಾರದಾ ಸಂಗೀತ ಶಾಲೆಯ ಮಾಧುರಿ ದಂಪತಿಯ ಸುಪುತ್ರ.

ಕನ್ನಡದ ಮಣ್ಣಿನ ಪ್ರತಿಭೆಯೊಬ್ಬರು ತಮಿಳು ಭಾಷೆಯನ್ನು ಕರಗತ ಮಾಡಿಕೊಂಡು, ನೆರೆಯ ರಾಜ್ಯದ ಪ್ರತಿಷ್ಠಿತ ಸಂಗೀತ ವೇದಿಕೆಯಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವುದು ಹೊಸನಗರ ಹಾಗೂ ಇಡೀ ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ತಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]