ರಿಪ್ಪನ್‌ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ರಾಜ್ಯ ಮಟ್ಟದ ಶಿಕ್ಷಕರ ಕವಿಗೋಷ್ಠಿ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗ್ರಾಮೀಣ ಗಾಯಕಿ ಸುಧಾಗೌಡರ ಅನನ್ಯ ಸೇವೆಯನ್ನು ಪರಿಗಣಿಸಿ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕುಗ್ರಾಮ ನೇರಲಮನೆ ಗ್ರಾಮದ ಸುಧಾಗೌಡ ತಮ್ಮ ಸಂಗೀತ ಗಾನಸುಧೆಯ ಮೂಲಕ ಸಂಗೀತಾಸಕ್ತರನ್ನು ತಮ್ಮ ಗಾಯನದ ಮೂಲಕ ಆಕರ್ಷಿಸುವುದರೊಂದಿಗೆ ಜನಪ್ರಿಯತೆಗೆ ಯಶಸ್ವಿಯಾಗಿದ್ದಾರೆ.

ಪತಿಯನ್ನು ಕಳೆದುಕೊಂಡರು ಧೈರ್ಯಗೆಡದೆ ತನ್ನ ಎರಡು ಮಕ್ಕಳ ಪಾಲನೆ ಪೋಷಣೆ ಮಾಡಿಕೊಂಡು ಜೀವನಕ್ಕಾಗಿ ಸಂಗೀತವನ್ನು ಆಶ್ರಯಿಸಿಕೊಂಡ ಇವರು ತಾಲ್ಲೂಕು, ಜಿಲ್ಲೆ, ಅಂತರ ಜಿಲ್ಲೆಗಳಿಗೆ ತೆರಳಿ ಸಂಗೀತ ಕಾರ್ಯಕ್ರಮವನ್ನು ನೀಡುವುದರೊಂದಿಗೆ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇವರ ಈ ಸಂಗೀತ ಕಾರ್ಯಕ್ರಮ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆ ಇನ್ನಿತರರಿಗೆ ಸ್ಫೂರ್ತಿಯಾಗಲೆಂದು ಆಶಿಸುವ ಮೂಲಕ ಗ್ರಾಮೀಣ ಪ್ರತಿಭೆಯನ್ನು ಗುರುತಿಸಿ ಸಂಗೀತಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಸಂಸ್ಥೆಯನ್ನು ಸಂಗೀತಾಸಕ್ತರು ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.