ಹೊಸನಗರ ; ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ಬಿಳ್ಳೋಡಿ ಸೇರಿದಂತೆ ಅಕ್ಕಪಕ್ಕದ ಊರುಗಳಲ್ಲಿ ಮಂಗನಕಾಯಿಲೆ ಮನುಷ್ಯರಲ್ಲಿ ಕಾಣಿಸಿಕೊಂಡಿದೆ.
ಕಳೆದ ವಾರವಷ್ಟೇ ಒಬ್ಬ ಮಹಿಳೆಯಲ್ಲಿ ಕಾಣಿಸಿಕೊಂಡಿದ್ದ ಸೋಂಕು ಈಗ ಇನ್ನೂ ಐವರಲ್ಲಿ ಕಾಣಿಸಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದರೂ, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಆರು ಜನ ಸೋಂಕಿತರ ಪೈಕಿ ಒಬ್ಬರು ಮಣಿಪಾಲದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನೊಬ್ಬರು ಮಣಿಪಾಲದಲ್ಲಿ ಹಾಗೂ ಉಳಿದ ನಾಲ್ವರು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಕಳೆದ ವರ್ಷ ತಾಲೂಕಿನ ಸಂಪೆಕಟ್ಟೆಯಲ್ಲಿ ಓರ್ವ ಮಹಿಳೆಗೆ ಕೆಎಫ್ಡಿ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಳು. ಅದಕ್ಕೂ ಹಿಂದಿನ ವರ್ಷಗಳಲ್ಲಿ ತಾಲೂಕಿನ ಹರಿದ್ರಾವತಿ, ಮಾರುತಿಪುರ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಮಂಗನಕಾಯಿಲೆ ಪ್ರಕರಣಗಳು ದಾಖಲಾಗಿದ್ದವು. ಬೇಸಿಗೆಯಲ್ಲಿ ಮಂಗಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆಗಳು ವರದಿಯಾಗಿದ್ದು, ಈಗ ಮಂಗನ ಕಾಯಿಲೆ ಒಂದೇ ಭಾಗದಲ್ಲಿ ಕಾಣಿಸಕೊಂಡಿರುವುದು ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚುಬಹುದು ಎಂದು ಅಂದಾಜಿಸಲಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಸೊನಲೆ ಸೇರಿದಂತೆ ತಾಲೂಕಿನ ಹಲವು ಕಡೆಗಳಲ್ಲಿ ಮಂಗನಾಕಾಐಇಲೆ ಕುರಿತು ಮುಂಜಾಗ್ರತಾ ಕ್ರಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಕರ್ಯ ಕೈಗೊಂಡಿದ್ದಾರೆ. ಉಣ್ಣೆಗಳು ಮೈಗೆ ಅಂಟದಂತೆ ತಡೆಯಲು ಡೀಪಾ ತೈಲ ಬಳಸಲು ಸೂಚಿಸಲಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಡೀಪಾ ತೈಲ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಬಳಸಬಹುದಾಗಿದೆ.

ಹೊಸನಗರ ಆಸ್ಪತ್ರೆಯಲ್ಲಿ ಜ್ವರ ತಪಾಸಣೆ ನಡೆಸಲಾಗುತ್ತಿದೆ. ಅನುಮಾನ ಬಂದಲ್ಲಿ ರಕ್ತ ಮಾದರಿಯನ್ನು ಹೆಚ್ಚಿನ ಪರೀಕ್ಷೆಗೆ ಜಿಲ್ಲಾ ಮಟ್ಟದ ಪ್ಮಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಬೇಕು. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ನೀಡಿದಲ್ಲಿ ರೋಗಿ ಚೇತರಿಸಿಕೊಳ್ಳಬಹುದು.
– ಡಾ. ಶಾಂತರಾಜ್, ತಾಲೂಕು ಆರೋಗ್ಯಾಧಿಕಾರಿ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





