ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ ಒಂದು ಲಕ್ಷ ರೂ. ಮಂಜೂರಾಗಿದೆ.
ಈ ಒಂದು ಲಕ್ಷ ರೂ. ಮೊತ್ತದ ಡಿಡಿಯನ್ನು ಶಿವಮೊಗ್ಗ ಜಿಲ್ಲೆಯ ನಿರ್ದೇಶಕರಾದ ಮುರುಳಿಧರ್ ಶೆಟ್ಟಿ ಹಾಗೂ ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್, ಕೋಡೂರು ವಲಯದ ಮೇಲ್ವಿಚಾರಕಿ ಉಮಾ, ಸೇವಾ ಪ್ರತಿನಿಧಿಯ ಸಮ್ಮುಖದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರದೀಪ್ ಆರ್ ಮಾತನಾಡಿ, ನಾವು ಹೊಸನಗರ ತಾಲ್ಲೂಕಿನಲ್ಲಿ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಾಕಷ್ಟು ಹಣವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಾಗೂ ಶ್ರೀ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಸಹಾಯ ಹಸ್ತದಿಂದ ನೀಡುತ್ತಾ ಬಂದಿದ್ದು, ನಾವು ನೀಡುವ ಹಣ ದೇವಸ್ಥಾನಕ್ಕೆ ಅಳಿಲು ಸೇವೆಯಾಗಿದ್ದು, ಈ ಹಣ ಸರಿಯಾದ ರೀತಿಯಲ್ಲಿ ಸದ್ಭಳಕೆಯಾಗಲಿ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿ ಅಧ್ಯಕ್ಷ ಸತೀಶ್, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಒಕ್ಕೂಟದ ಅಧ್ಯಕ್ಷ ಸುರೇಶ್, ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಜಯಪ್ರಕಾಶ್, ಸದಸ್ಯ ಯೋಗೇಂದ್ರಪ್ಪ, ಸಂಘದ ಸದಸ್ಯರುಗಳು, ಗ್ರಾಮಸ್ಥರು ಇದ್ದರು.