RIPPONPETE | ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದು (Snake Bite) ರೈತ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹರತಾಳು ಗ್ರಾ.ಪಂ. ವ್ಯಾಪ್ತಿಯ ಶುಂಠಿಕೊಪ್ಪ (Shuntikoppa) ಗ್ರಾಮದಲ್ಲಿ ನಡೆದಿದೆ.

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ
ವೀಣಾಕುಮಾರಿ ಕೋಂ ಸತೀಶ್ (35) ಮೃತ ದುರ್ಧೈವಿ. ಶುಂಠಿಕೊಪ್ಪ ಗ್ರಾಮದಲ್ಲಿನ ತಮ್ಮ ಸ.ನಂ. 16ರಲ್ಲಿನ ಜಮೀನಿನಲ್ಲಿ ಅಡಿಕೆ ತೋಟದಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕಳೆ ತೆಗೆಯುವ ವೇಳೆ ವೀಣಾಕುಮಾರಿ ರವರ ಎಡಗಾಲಿನ ಕಿರುಬೆರಳಿಗೆ ನಾಗರಹಾವು ಕಚ್ಚಿದೆ. ಕೂಡಲೇ ನಾಟಿ ಔಷಧಕ್ಕಾಗಿ ಸಾಗರ ತಾಲೂಕಿನಲ್ಲಿರುವ ಗೆಣಸಿನಕುಣಿಗೆ ಕರೆದುಕೊಂಡು ಹೋಗಿ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ವೀಣಾಕುಮಾರಿ ಮಧ್ಯಾಹ್ನ 3:30ರ ಸುಮಾರಿಗೆ ಸಾವನ್ನಪ್ಪಿದ್ದಾರೆ.

ಮೃತದೇಹವನ್ನು ಸಾಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಮೃತಳಿಗೆ ಪತಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.