Ripponpete

Snake Bite | ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಮಹಿಳೆ ಸಾವು !

RIPPONPETE | ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದು (Snake Bite) ರೈತ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹರತಾಳು ಗ್ರಾ.ಪಂ. ವ್ಯಾಪ್ತಿಯ ಶುಂಠಿಕೊಪ್ಪ (Shuntikoppa) ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

ವೀಣಾಕುಮಾರಿ ಕೋಂ ಸತೀಶ್ (35) ಮೃತ ದುರ್ಧೈವಿ. ಶುಂಠಿಕೊಪ್ಪ ಗ್ರಾಮದಲ್ಲಿನ ತಮ್ಮ ಸ.ನಂ. 16ರಲ್ಲಿನ ಜಮೀನಿನಲ್ಲಿ ಅಡಿಕೆ ತೋಟದಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕಳೆ ತೆಗೆಯುವ ವೇಳೆ ವೀಣಾಕುಮಾರಿ ರವರ ಎಡಗಾಲಿನ ಕಿರುಬೆರಳಿಗೆ ನಾಗರಹಾವು ಕಚ್ಚಿದೆ. ಕೂಡಲೇ ನಾಟಿ ಔಷಧಕ್ಕಾಗಿ ಸಾಗರ ತಾಲೂಕಿನಲ್ಲಿರುವ ಗೆಣಸಿನಕುಣಿಗೆ ಕರೆದುಕೊಂಡು ಹೋಗಿ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ವೀಣಾಕುಮಾರಿ ಮಧ್ಯಾಹ್ನ 3:30ರ ಸುಮಾರಿಗೆ ಸಾವನ್ನಪ್ಪಿದ್ದಾರೆ‌.

ಮೃತದೇಹವನ್ನು ಸಾಗರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಮೃತಳಿಗೆ ಪತಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ‌. ಮೃತಳ ತಾಯಿ ನೀಡಿದ ದೂರಿನ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Rain | ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆಯಾಗಲಿದೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!