SAGARA | ಹಾವು ಕಡಿದು (Snake Bite) 4 ತಿಂಗಳ ಬಾಣಂತಿ ಮೃತಪಟ್ಟ ಘಟನೆ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ.
ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ !

ರಂಜಿತಾ (22) ಮೃತ ದುರ್ಧೈವಿ. ಗದ್ದೆಯಲ್ಲಿ ಮೇವು ತರಲು ಹೊರಟಿದ್ದ ವೇಳೆ ಪೊದೆಯಲ್ಲಿದ್ದ ಹಾವು ಕಡಿದಿದೆ. ಕೆಲಹೊತ್ತಿನ ನಂತರ ಹಾವು ಕಚ್ಚಿರುವುದು ರಂಜಿತಾ ಅರಿವಿಗೆ ಬಂದಿದೆ. ಕುಟುಂಬಸ್ಥರು ನೋಡಿದಾಗ ಬಾಣಂತಿ ರಂಜಿತ ಗದ್ದೆಯಲ್ಲಿ ಕುಸಿದು ಬಿದ್ದಿದ್ದಳು. ಇದನ್ನು ಗಮನಿಸಿ ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತ ಮೃತಪಟ್ಟಿದ್ದಾರೆ.
ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು !
ಮೃತ ಮಹಿಳೆಗೆ ಮೂರು ವರ್ಷದ ಹೆಣ್ಣು ಹಾಗೂ 4 ತಿಂಗಳ ಗಂಡು ಮಗು ಇದೆ. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.