ಚಿಕ್ಕಮಗಳೂರು ; ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂ*ದು, ಆಕೆ ಮೃ*ತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಭವಾನಿ (52) ಮಗನಿಂದಲೇ ಹ*ತ್ಯೆಯಾದ ದುರ್ದೈವಿ ಮಹಿಳೆ. ಮಗ ಪವನ್ (28) ಹೆತ್ತ ತಾಯಿಯನ್ನೇ ಕೊಂ*ದ ಆರೋಪಿಯಾಗಿದ್ದಾನೆ.
ಏನಿದು ಘಟನೆ ?
ಪವನ್ ಮದುವೆ ಕೂಡ ಆಗಿರಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ. ಕಳೆದ ರಾತ್ರಿ ತಾಯಿಯನ್ನ ಕೊಂದು ಮನೆಯೊಳಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾನೆ. ಬಳಿಕ ತಾಯಿ ಮೃ*ತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊ*ಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ.

ಅಕ್ಕಪಕ್ಕದವರು ದೌಡಾಯಿಸಿ ಬಂದು ನೋಡುವಷ್ಟರಲ್ಲೇ ಭವಾನಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದರು. ಕಾಲು ಹಾಗೂ ಕೈ ಮಾತ್ರ ಉಳಿದಿತ್ತು.
ಅಕ್ಕಪಕ್ಕದವರಿಂದ ವಿಷಯ ತಿಳಿದ ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪವನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಳೆದ 2 ತಿಂಗಳ ಹಿಂದೆ ಪವನ್ ಕುಡಿದು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಗ್ರಾಮದ ಹಿರಿಯರು ಬುದ್ದಿ ಹೇಳಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.