SORABA | ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವ ನದಿಯಲ್ಲಿ ನಾಪತ್ತೆಯಾದ ಘಟನೆ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ.
ಉದ್ರಿ ವಡ್ಡಿಗೇರೆ ಗ್ರಾಮದ ನಿವಾಸಿ ಯಲ್ಲಪ್ಪ (45) ನದಿಯಲ್ಲಿ ನಾಪತ್ತೆಯಾದ ವ್ಯಕ್ತಿ. ಈತ ಶುಕ್ರವಾರ ಸಂಜೆ ತನ್ನ ಸಹೋದರನೊಂದಿಗೆ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಘಟನೆ ಸಂಭವಿಸಿದೆ. ನದಿಯ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿದ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ 8ರವರೆಗೂ ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಂಜುಳಾ ಹೆಗಡಾಳ್, ಪಿಎಸ್ಐ ನಾಗರಾಜ್, ತಾಪಂ ಇಒ ಡಾ. ಪ್ರದೀಪ್ ಕುಮಾರ್ ಭೇಟಿ ನೀಡಿದರು. ಈವರೆಗೂ ಯಲ್ಲಪ್ಪ ಪತ್ತೆಯಾಗಿಲ್ಲ.
HOSANAGARA :ಶನಿವಾರವೂ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.