ಶಿವಮೊಗ್ಗ ಸುದ್ದಿ

ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ; ತಲಾ ₹15 ಸಾವಿರ ಪ್ರೋತ್ಸಾಹಧನ

ಬೆಂಗಳೂರಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ 45 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗೂ ₹15 ಸಾವಿರ ಪ್ರೋತ್ಸಾಹಧನ ವಿತರಿಸಲಾಯಿತು.

ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಸನ್ಮಾನ; ತಲಾ ₹15 ಸಾವಿರ ಪ್ರೋತ್ಸಾಹಧನ – MalnadTimes Cultural Awards Ceremony

ಬೆಂಗಳೂರು: ಸೊರಬ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಶ್ರೀ ಎಸ್. ಬಂಗಾರಪ್ಪ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಟೀಮ್ ಸಮ್ಮಿಲನ ವತಿಯಿಂದ ಆನಂದರಾವ್ ಸರ್ಕಲ್ ಸಮೀಪದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

“ನಮ್ಮ ತಂದೆ ಎಸ್. ಬಂಗಾರಪ್ಪ ಅವರು ನಮ್ಮ ಕುಟುಂಬದ ಆಸ್ತಿಯಲ್ಲ, ಇಡೀ ಸೊರಬದ ಜನತೆಯ ಆಸ್ತಿ. ನಿಮ್ಮ ಕುಟುಂಬದ ಹಿರಿಯರು ಅವರನ್ನು ಗೆಲ್ಲಿಸಿ ಮುಖ್ಯಮಂತ್ರಿಯಾಗುವ ಮಟ್ಟಿಗೆ ಬೆಂಬಲ ನೀಡಿದ್ದಾರೆ. ಆ ಋಣ ನಮ್ಮ ಮೇಲಿದೆ. ಸೊರಬದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವುದು ನಮ್ಮ ತಂದೆಯವರಿಗೆ ಸಲ್ಲಿಸುವ ಗೌರವ” ಎಂದು ಮಧು ಬಂಗಾರಪ್ಪ ಹೇಳಿದರು.

45 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದವರು ಮತ್ತು ಕ್ರೀಡೆ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಒಟ್ಟು 45 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರತಿಯೊಬ್ಬ ವಿದ್ಯಾರ್ಥಿಗೂ ₹15 ಸಾವಿರ ಪ್ರೋತ್ಸಾಹಧನ ವಿತರಿಸಲಾಯಿತು.

‘ಸಾಧನೆಯ ಹಿಂದೆ ಪೋಷಕರ ಶ್ರಮವಿದೆ’

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ತಮ್ಮ ಸಾಧನೆಯ ಹಿಂದೆ ಪೋಷಕರ ಪರಿಶ್ರಮವನ್ನು ಮರೆಯಬಾರದು ಎಂದರು.

“ನಿಮ್ಮ ಸಾಧನೆಯನ್ನು ತಂದೆ-ತಾಯಿಗೆ ಅರ್ಪಿಸಿ. ಅವರು ಶ್ರಮಪಟ್ಟು ನಿಮ್ಮನ್ನು ಓದಿಸಿದ್ದರಿಂದಲೇ ನೀವು ಈ ಹಂತಕ್ಕೆ ಬಂದಿದ್ದೀರಿ. ಈ ಪ್ರೋತ್ಸಾಹ ನಿಮ್ಮ ಮುಂದಿನ ಸಾಧನೆಗೆ ಸ್ಫೂರ್ತಿಯಾಗಲಿ. ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು” ಎಂದು ಹಾರೈಸಿದರು.

ಬೆಂಗಳೂರಿನಲ್ಲಿ ಉದ್ಯೋಗ ಹಾಗೂ ವಿವಿಧ ಕಾರಣಗಳಿಂದ ನೆಲೆಸಿರುವ ಸೊರಬದ ಜನರು ಒಟ್ಟಾಗಿ ಟೀಮ್ ಸಮ್ಮಿಲನ ಸಂಘಟನೆಯನ್ನು ಕಟ್ಟಿಕೊಂಡು ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಸಂತಸದ ಸಂಗತಿ ಎಂದರು.

‘ಲಕ್ಷಾಂತರ ಬಂಗಾರಪ್ಪರನ್ನು ಪಡೆದುಕೊಂಡಿದ್ದೇನೆ’

ಸೊರಬ ಹಾಗೂ ಶಿವಮೊಗ್ಗ ಜಿಲ್ಲೆಯ ಜನರ ಪ್ರೀತಿ ಮತ್ತು ಅಭಿಮಾನವನ್ನು ಸ್ಮರಿಸಿದ ಮಧು ಬಂಗಾರಪ್ಪ, ತಮ್ಮ ತಂದೆ ಎಸ್. ಬಂಗಾರಪ್ಪ ಅವರೊಂದಿಗೆ ಜನರು ಹೊಂದಿದ್ದ ನಂಟಿನ ಬಗ್ಗೆ ಭಾವುಕರಾಗಿ ಮಾತನಾಡಿದರು.

“ನಾನು ನಮ್ಮ ತಂದೆ ಬಂಗಾರಪ್ಪ ಅವರನ್ನು ಕಳೆದುಕೊಂಡಿರಬಹುದು; ಆದರೆ ಲಕ್ಷಾಂತರ ಬಂಗಾರಪ್ಪರನ್ನು ಪಡೆದುಕೊಂಡಿದ್ದೇನೆ ಎಂಬ ಹೆಮ್ಮೆ ನನಗಿದೆ” ಎಂದರು.

ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಸೊರಬದ ಗೌರವವನ್ನು ಹೆಚ್ಚಿಸುತ್ತಿದ್ದಾರೆ. ಶಿಕ್ಷಣ ಸಚಿವನಾಗಿ ಅವರನ್ನು ಗೌರವಿಸುವ ಅವಕಾಶ ದೊರೆತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಸಚಿವ ದಂಪತಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಅವರ ಪತ್ನಿ ಅನಿತಾ ಎಸ್. ಮಧು ಬಂಗಾರಪ್ಪ ಅವರನ್ನು ಟೀಮ್ ಸಮ್ಮಿಲನ ವತಿಯಿಂದ ಸನ್ಮಾನಿಸಲಾಯಿತು.

ಆರ್‌ಡಿಪಿಆರ್ ಇಲಾಖೆಯ ನಿರ್ದೇಶಕ ಏಕಾಂತಪ್ಪ ಸ್ವಾಗತಿಸಿದರು. ಗಣಪತಿ ಹಳೆಸೊರಬ ಹಾಗೂ ಬಿಂದು ಎಚ್.ಎನ್. ಕಾರ್ಯಕ್ರಮ ನಿರೂಪಿಸಿದರು. ಸೃಷ್ಟಿ ಇ. ಪ್ರಾರ್ಥಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!