Hosanagara

ಸೋರೆಕೊಪ್ಪ ಚಿನ್ನಪ್ಪ ನಿಧನ !

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋರೆಕೊಪ್ಪದ ಕಟ್ಟ ಬಿಜೆಪಿ ಕಾರ್ಯಕರ್ತ ಚಿನ್ನಣ್ಣ (75) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ 9:00 ಗಂಟೆಗೆ ಕೊನೆಯುಸಿರೆಳೆದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಾಗಿ ರಾಜಕೀಯಕ್ಕೆ ಧುಮುಕಿದ ಚಿನ್ನಪ್ಪರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ಬಿಜೆಪಿ ಮುಖಂಡರುಗಳು, ಆರ್ಯ ಈಡಿಗ ಸಂಘದ ಮುಖಂಡರುಗಳು, ನೂರಾರು ಅಭಿಮಾನಿಗಳು, ಗ್ರಾಮಸ್ಥರು ಅವರ ನಿವಾಸಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದರು.

ಸೋರೆಕೊಪ್ಪದ ತುಂಬು ಕುಟುಂಬದ ಹಿರಿಯರಾದ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಆರು ಜನ ಸಹೋದರರು, ಮೂವರು ಸಹೋದರಿಯರನ್ನು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಸೋಮವಾರ ಮಧ್ಯಾಹ್ನ ಸೋರೆಕೊಪ್ಪದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>