Ripponpete

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೊದಲನೇ ಶ್ರಾವಣ ಮಾಸದ ವಿಶೇಷ ಪೂಜೆ | ಭಕ್ತರ ಸಂಕಲ್ಪ ಈಡೇರಲಿ ; ಶ್ರೀಗಳು

ರಿಪ್ಪನ್‌ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಪೂಜಾ ವಿಧಿಗಳು ಭಕ್ತರ ಪಾಲ್ಗೊಳ್ಳುವಿಕೆಯಿಂದ ಸಾಂಪ್ರದಾಯಿಕವಾಗಿ ನೆರವೇರಿತು. ವಿವಿಧ ಧಾನ್ಯಗಳನ್ನು ಸಮರ್ಪಿಸಿ, ಫಲ ಪುಷ್ಪಗಳ ಅಲಂಕಾರದೊಂದಿಗೆ ಊರ ಪರವೂರ ಭಕ್ತರು ಭಕ್ತಿಭಾವಗಳಿಂದ ಸಂತೃಪ್ತರಾದರು.

WhatsApp Group Join Now
Telegram Group Join Now
Instagram Group Join Now

ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಸಾನಿಧ್ಯ, ನೇತೃತ್ವ ಮತ್ತು ಉಪಸ್ಥಿತಿಯಲ್ಲಿ ಜಿನಾಗಮೋಕ್ತ ವಿಧಿಯಂತೆ ಪೂಜಾ ವಿಧಾನಗಳು ಜರುಗಿದವು. ಭಕ್ತರು ಸ್ತೋತ್ರಗಳನ್ನು ಪಠಿಸಿದರು.

ಸ್ವಸ್ತಿಶ್ರೀಗಳವರು “ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಗೆ ಭಕ್ತರು ಸ್ವಯಂಪ್ರೇರಿತರಾಗಿ ಆಗಮಿಸಿ ತಮ್ಮ ಸಂಕಲ್ಪವು ಫಲ ನೀಡಲೆಂದು ಪ್ರಾರ್ಥಿಸುತ್ತಾರೆ. ಭಕ್ತರ ಸಂಕಲ್ಪ ಈಡೇರಲೆಂದು ಶ್ರೀ ಪದ್ಮಾವತಿ ದೇವಿ ಸದಾ ಹರಸುತ್ತಿರಲಿ” ಎಂದು ಪ್ರವಚನದಲ್ಲಿ ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ಸಂದರ್ಭದಲ್ಲಿ ಪ್ರಾತಃ ಕಾಲದಲ್ಲಿ ಶ್ರೀ ನೇಮಿನಾಥ ಸ್ವಾಮಿ, ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಸರಸ್ವತಿ ದೇವಿ ಹಾಗೂ ಕೂಷ್ಮಾಂಡಿನಿ ದೇವಿ, ಶ್ರೀ ಕ್ಷೇತ್ರಪಾಲ, ಶ್ರೀ ನಾಗ ಸನ್ನಿಧಿಯಲ್ಲಿ ಪೂಜೆಗಳು ನೆರವೇರಿದವು. ಅಭೀಷ್ಠ ಪ್ರಸಾಧ ಭವನದಲ್ಲಿ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ, ವಸತಿ ಗೃಹಗಳಲ್ಲಿ ಪರವೂರ ಭಕ್ತರಿಗೆ ವಸತಿ ಸೌಲಭ್ಯ ಶಿಸ್ತುಬದ್ಧವಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!