ರಿಪ್ಪನ್‌ಪೇಟೆ : ಐತಿಹಾಸಿಕ ಕೊಳವಂಕದ ಶ್ರೀ ಬಸವಣ್ಣನವರ ದೇವಸ್ಥಾನದಲ್ಲಿ, ಸಕಾಲಕ್ಕೆ ಮಳೆಯಾಗಲಿ ಎಂದು ಪ್ರಾರ್ಥಿಸಿ ಗ್ರಾಮಸ್ಥರು ಹಾಗೂ ರೈತರು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಅರ್ಚಕ ಯೋಗೇಂದ್ರಗೌಡ ಅವರ ಪೌರೋಹಿತ್ಯದಲ್ಲಿ ಸ್ವಾಮಿಗೆ ಕ್ಷೀರಾಭಿಷೇಕ, ವಿವಿಧ ದ್ರವ್ಯಗಳ ಅಭಿಷೇಕ ಮತ್ತು ವಿಶೇಷ ಮಹಾಮಂಗಳಾರತಿ ನಡೆಯಿತು.
ಮಲೆನಾಡು ಪ್ರದೇಶದಲ್ಲಿ ಕಳೆದ ಒಂದೂವರೆ ತಿಂಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ, ಬೆಳೆಗಳ ರಕ್ಷಣೆಗೆ ಕಂಗಾಲಾಗಿದ್ದ ರೈತರು ದೇವರಿಗೆ ನಮಿಸಿ ಮಳೆಗಾಗಿ ಪ್ರಾರ್ಥಿಸಿದರು. ಪೂಜೆಯ ನಂತರ ಭಕ್ತರಿಗೆ ತೀರ್ಥಪ್ರಸಾದ ವಿತರಿಸಲಾಯಿತು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಈ ಪೂಜಾ ಕಾರ್ಯಕ್ರಮದಲ್ಲಿ ಕೊಳವಂಕ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಅಪಾರ ಸಂಖ್ಯೆಯ ರೈತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

