ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

Written by Mahesha Hindlemane

Published on:

ಶಿವಮೊಗ್ಗ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಜ.13 ರಂದು (ಮಂಗಳವಾರ) ರಾತ್ರಿ 10:45 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ.

ಇದರ ಜೋಡಿ ರೈಲು, ರೈಲು ಸಂಖ್ಯೆ 06586 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಜ. 14 ರಂದು (ಬುಧವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅಂದೇ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್ (8), ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್ಆರ್/ಡಿ (2) ಬೋಗಿಗಳು ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತದೆ.

ಅದೇ ರೀತಿ, ರೈಲು ಸಂಖ್ಯೆ 06587 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ಜ.23 ರಂದು (ಶುಕ್ರವಾರ) ರಾತ್ರಿ 10:45 ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ.

ಇದರ ಜೋಡಿ ರೈಲು, ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಜ.24 ರಂದು (ಶನಿವಾರ) ಬೆಳಿಗ್ಗೆ 10:00 ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15 ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಲಾಭವನ್ನು ಪಡೆದುಕೊಳ್ಳಲು ಹಾಗೂ ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

Leave a Comment