SHIVAMOGGA ; ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ ಪುತ್ರಿಯಾಗಿದ್ದು ಈಕೆಯ ಅಪ್ರತಿಮ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ಎಂ ರಂಗನಾಥ್, ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್ ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಶುಭ ಹಾರೈಸಿ ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.