HOSANAGARA ; ಡ್ರೋನ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋನ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು ಸಮಗ್ರ ಮಾಹಿತಿ ನೀಡಿದರು.

ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶರಣಗೌಡ, ಜಿಲ್ಲಾ ಐ.ಎಫ್.ಸಿ.ಒ ಸಂಸ್ಥೆಯ ಕ್ಷೇತ್ರಾಧಿಕಾರಿ ಬಿ.ಎಲ್. ರಾಜು, ಆತ್ಮ ಯೋಜನೆಯ ಸಿಬ್ಬಂದಿ ಸೈಯದ್ ಅವರ ಸಹಕಾರದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.