ಸಾಗರ

ಸಸಿಗೊಳ್ಳಿಯಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್ ಸೇವೆ ಆರಂಭ

ಸಸಿಗೊಳ್ಳಿಯಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಬಸ್ ಸೇವೆ ಆರಂಭ – bus

ನಿಟ್ಟೂರು: ನಿಟ್ಟೂರು–ಬೆಂಗಳೂರು ಮಾರ್ಗದಲ್ಲಿ ಬಸ್ ಸೇವೆ ನೀಡುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಸಂಸ್ಥೆ ಇದೀಗ ಸಸಿಗೊಳ್ಳಿ–ಬೆಂಗಳೂರು ಮಾರ್ಗಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದೆ.

WhatsApp Group Join Now
Telegram Group Join Now
Instagram Group Join Now

2024ರಲ್ಲಿ ನಿಟ್ಟೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಆರಂಭಿಸಿದ್ದ ಸಂಸ್ಥೆ, ಕಳೆದ ಎರಡು ವರ್ಷಗಳಿಂದ ಈ ಮಾರ್ಗದಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿದೆ. ಇದೀಗ ಸಸಿಗೊಳ್ಳಿಯಿಂದ ಬೆಂಗಳೂರಿಗೆ ಹೊಸ ಬಸ್ ಸೇವೆಯನ್ನು ಆರಂಭಿಸುವ ಮೂಲಕ ಮತ್ತೊಂದು ಮಾರ್ಗದಲ್ಲಿ ಇಂದಿನಿಂದ ಕಾರ್ಯಾಚರಣೆ ಆರಂಭಿಸಿದೆ.

ಸಂಸ್ಥೆಯ ಸೇವಾ ವಿಸ್ತರಣೆಗೆ ಸ್ಥಳೀಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ. ನಿಟ್ಟೂರು–ಬೆಂಗಳೂರು ಮಾರ್ಗದಲ್ಲಿನ ಸೇವೆ, ಸಿಬ್ಬಂದಿಯ ಸ್ನೇಹಪರ ನಡೆ ಹಾಗೂ ಚಾಲಕರ ಜವಾಬ್ದಾರಿಯುತ ಕಾರ್ಯನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೊಸ ಮಾರ್ಗದ ಸೇವೆಯು ಸಸಿಗೊಳ್ಳಿ ಭಾಗದಿಂದ ಬೆಂಗಳೂರಿಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿ. ಮುಂದಿನ ದಿನಗಳಲ್ಲಿ ಸಂಸ್ಥೆಯ ಸೇವೆ ಇನ್ನಷ್ಟು ಪ್ರದೇಶಗಳಿಗೆ ವಿಸ್ತರಿಸಲಿ ಎಂದು ಹಿತೈಷಿಗಳು ಹಾರೈಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್