ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ತಮ್ಮ 33ನೇ ವರ್ಷದ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜಾ ತಪೋನುಷ್ಠಾನವನ್ನು ಆಗಸ್ಟ್ 5ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಸುವರು.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮಲಯಾಚಲ ತಪೋಭೂಮಿ ಬಾಳೆಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ತ್ರಿಕಾಲ ಇಷ್ಟಲಿಂಗ ಮಹಾಪೂಜಾನುಷ್ಠಾನ ನಡೆಯಲಿದ್ದು ಪ್ರತಿ ದಿನ ಬೆಳಿಗ್ಗೆ 8.30ಕ್ಕೆ ನಡೆಸುವ ಮಹಾಪೂಜೆಯಲ್ಲಿ ಸೇವಾಕರ್ತರಿಗೆ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶವಿದೆ.
ಆಗಸ್ಟ್ 8ರಂದು ಲಿಂ. ಶ್ರೀ ರಂಭಾಪುರಿ ಜಗದ್ಗುರು ಶಿವಾನಂದ ರಾಜೇಂದ್ರ ಶಿವಾಚಾರ್ಯ ಭಗವತ್ಪಾದರ 77ನೇ ವರ್ಷದ ಪುಣ್ಯ ಸ್ಮರಣೋತ್ಸವ ಜರುಗಲಿದ್ದು ಖಾಂಡ್ಯ ಮತ್ತು ಜಾಗರ ಹೋಬಳಿ ಶಿಷ್ಯ ಸದ್ಭಕ್ತರಿಂದ ದಾಸೋಹ ಸೇವೆ ನಡೆಯುವುದು.
ಆಗಸ್ಟ್ 12ರಂದು ಲಿಂ. ಶ್ರೀ ರಂಭಾಪುರಿ ಜಗದ್ಗುರು ವೀರರುದ್ರಮುನಿದೇವ ಶಿವಾಚಾರ್ಯ ಭಗವತ್ಪಾದರ 32ನೇ ವರ್ಷದ ಪುಣ್ಯ ಸ್ಮರಣೋತ್ಸವ ಜರುಗಲಿದ್ದು ಆಲ್ದೂರು ಹೋಬಳಿ ವೀರಶೈವ ಸಮಾಜದಿಂದ ಪೂಜಾ ಹಾಗೂ ದಾಸೋಹ ಸೇವೆ ಜರುಗುವುದು.
ಅಬ್ಬರ ಮುಗಿಸಿದ ‘ಪುಷ್ಯ’, ಲಿಂಗನಮಕ್ಕಿ ಜಲಾಶಯ ಭರ್ತಿಗೆ 5 ಅಡಿ ನೀರು ಬಾಕಿ !
ವರ್ಷದ 365 ದಿನ ರುದ್ರಾಭಿಷೇಕ ಹಾಗೂ ಶ್ರಾವಣ ಮಾಸ ಪರ್ಯಂತರ ಮಹಾರುದ್ರಾಭಿಷೇಕ ಹಾಗೂ ಸಿಹಿ ಪ್ರಸಾದ ವಿತರಣೆ ಸೇವೆಯನ್ನು ಭದ್ರಾವತಿಯ ಲಿಂ.ಎಸ್.ಜಿ.ಶಿವಶಂಕರಯ್ಯನವರ ಮಕ್ಕಳು ನೆರವೇರಿಸುವರು.
ಶ್ರಾವಣ ಮಾಸದ ಅಂಗವಾಗಿ ಪ್ರತಿ ದಿನ ಸಂಜೆ 7 ಗಂಟೆಗೆ ಮಹಾರಾಷ್ಟ್ರದ ಉಟಗಿ ಹಿರೇಮಠದ ಶಿವಪ್ರಸಾದ ದೇವರಿಂದ “ಶ್ರೀ ಜಗದ್ಗುರು ರೇಣುಕ ವಿಜಯ” ಪುರಾಣ ಪ್ರವಚನ ನಡೆಯಲಿದ್ದು ಆಗಮಿಸುವ ಪಟ್ಟಾಧ್ಯಕ್ಷರಿಂದ ಹಾಗೂ ವಾಗ್ಮಿಗಳಿಂದ ನುಡಿ ಸೇವೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ಸೋಮವಾರ ಹಾಗೂ ಗುರುವಾರ ಶ್ರೀ ರಂಭಾಪುರಿ ಜಗದ್ಗುರುಗಳು ಶುಭಾಶೀರ್ವಾದ ಸಂದೇಶ ಅನುಗ್ರಹಿಸುವರು.
ಪ್ರತಿ ನಿತ್ಯ ಪ್ರಾತಃಕಾಲದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಸೋಮೇಶ್ವರ ಮಹಾಲಿಂಗಕ್ಕೆ, ಶಕ್ತಿಮಾತೆ ಶ್ರೀ ಚೌಡೇಶ್ವರಿ-ಶ್ರೀ ಭದ್ರಕಾಳಿ, ಶ್ರೀ ಪಾರ್ವತಿ ಅಮ್ಮನವರಿಗೆ, ಲಿಂಗೈಕ್ಯ ಜಗದ್ಗುರುಗಳವರ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಅಷ್ಟೋತ್ತರ, ಮಹಾಮಂಗಲ ವಿಶೇಷ ಪೂಜೆ ನಡೆಯುವುದು.
SHIVAMOGGA | ನಗರದಲ್ಲಿ ನೀರು ಸರಬರಾಜು ವ್ಯತ್ಯಯ !
ಶ್ರಾವಣ ಪರ್ಯಂತ ಪುರಾಣ ಪೂಜಾ ಸೇವೆಯನ್ನು ಬೆಂಗಳೂರಿನ ಲತಾ ಡಾ.ಬಸವರಾಜ ಜಿಗಳೂರ ಇವರು, ಗದ್ದಿಗೆ ಹೂವಿನ ಸೇವೆಯನ್ನು ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟ್ ಚಿಕ್ಕಮಗಳೂರು, ದಾಸೋಹ ಸೇವೆಯನ್ನು ಗದಗ ಬೆಟಗೇರಿಯ ಶ್ರೀ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರ ಟ್ರಸ್ಟನವರು, ಹೂವಿನ ಸೇವೆಯನ್ನು ಭದ್ರಾವತಿಯ ಎಸ್.ಎಸ್.ಉಮೇಶ್, ಕ್ಷೀರಾಭಿಷೇಕ ಸೇವೆಯನ್ನು ಬೆಂಗಳೂರಿನ ಆರ್.ಗಣೇಶಕುಮಾರ್ ಹಾಗೂ ಪತ್ರಿಕಾ ಮುದ್ರಣ ಸೇವೆಯನ್ನು ಚಿಕ್ಕಮಗಳೂರಿನ ಶ್ರೀ ದೇವ ಮತ್ತು ಕೋ ಇವರು ವಹಿಸಿಕೊಂಡಿದ್ದಾರೆ.
ಶ್ರೀ ಪೀಠಕ್ಕೆ ಆಗಮಿಸುವ ಭಕ್ತಾದಿಗಳಿಗಾಗಿ ಬೆಳಗಿನ ಫಲಾಹಾರ ಮಧ್ಯಾಹ್ನ ಮತ್ತು ರಾತ್ರಿ ದಾಸೋಹದ ವ್ಯವಸ್ಥೆ ಇರುತ್ತದೆ.