ರಿಪ್ಪನ್‌ಪೇಟೆ ; ಪಟ್ಟಣದ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆದ ಕೆರೆಹಳ್ಳಿ ಹೋಬಳಿ ಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟದಲ್ಲಿ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯವು ಅತ್ಯುತ್ತಮ ಸಾಧನೆ ಮೆರೆದಿದೆ. ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಅಗ್ರ ಸ್ಥಾನಗಳನ್ನ ಗಳಿಸಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಕರ ವಿಭಾಗದಲ್ಲಿ ;
ಕಬಡ್ಡಿ ಪ್ರಥಮ, ಎತ್ತರ ಜಿಗಿತ ಪ್ರಥಮ, 100 ಮೀಟರ್ ಮತ್ತು 400 ಮೀಟರ್ ರಿಲೇ ದ್ವಿತೀಯ, 200 ಮೀಟರ್ ದ್ವಿತೀಯ, 400 ಮೀಟರ್ ದ್ವಿತೀಯ, 100 ಮೀಟರ್ ದ್ವಿತೀಯ, ಗುಂಡು ಎಸೆತ ದ್ವಿತೀಯ, ಉದ್ದ ಜಿಗಿತ ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ;
ಕಬಡ್ಡಿ ಪ್ರಥಮ, 100 ಮತ್ತು 400 ಮೀಟರ್ ರಿಲೇ ಪ್ರಥಮ, 200 ಮೀಟರ್ ಪ್ರಥಮ, ಗುಂಡು ಎಸೆತ ಪ್ರಥಮ, 600 ಮೀಟರ್ ಪ್ರಥಮ ಹಾಗೂ ದ್ವಿತೀಯ, 400 ಮೀಟರ್ ದ್ವಿತೀಯ ಹಾಗೂ ತೃತೀಯ, 100 ಮೀಟರ್ ದ್ವಿತೀಯ ಸ್ಥಾನಗಳನ್ನು ಪಡೆದು ಗಮನ ಸೆಳೆದಿದ್ದಾರೆ.
ವಿಶೇಷವಾಗಿ ಬಾಲಕಿಯರ ವಿಭಾಗದಲ್ಲಿ ಆಯುಶ್ರೀ ಎಸ್ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಈ ಸಾಧನೆಯ ಮೂಲಕ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯವು ಸಮಗ್ರ ಪ್ರಶಸ್ತಿಯನ್ನು ಗೆದ್ದು ಶಾಲೆಗೆ ಮಾತ್ರವಲ್ಲ, ಊರಿಗೂ ಕೀರ್ತಿ ತಂದಿದೆ.
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಹಾಗೂ ಪೋಷಕರು ಹಾಗೂ ಗ್ರಾಮಸ್ಥರು ಮಕ್ಕಳ ಸಾಧನೆಯನ್ನು ಮೆಚ್ಚಿ ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.