CHIKKAMAGALURU ;
ಬಾಳೆಹೊನ್ನೂರು ಶ್ರೀಮದ್ರಂಭಾಪುರಿ ವೀರರುದ್ರಮುನಿ ಜಗದ್ಗುರುಗಳವರ ಜನ್ಮ ಶತಮಾನೋತ್ಸವದ ಸವಿನೆನಹಿಗಾಗಿ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ನಿರ್ಮಿಸಿರುವ “ಶ್ರೀ ಸೋಮೇಶ್ವರ ಮಹಲ್” ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆ ಡಿಶಂಬರ್ 14ರಂದು ಬೆಳಿಗ್ಗೆ 11.15 ಗಂಟೆಗೆ ಜರುಗಲಿದೆ.
ಶ್ರೀ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಜರುಗಲಿರುವ ಸಮಾರಂಭದ ಸಾನ್ನಿಧ್ಯವನ್ನು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ವಹಿಸುವರು.
ಶಾಸಕರಾದ ಹೆಚ್.ಡಿ.ತಮ್ಮಯ್ಯ ಉದ್ಘಾಟಿಸಲಿದ್ದು ಅ.ಭಾ.ವೀರಶೈವ ಶಿವಾಚಾರ್ಯ ಸಂಸ್ಥೆಯ ಗೌರವಾಧ್ಯಕ್ಷರಾದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸುವರು.
ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯರು ಪ್ರಾಸ್ತಾವಿಕ ನುಡಿಯಲಿದ್ದು ಬೇರುಗಂಡಿ ಬೃಹನ್ಮಠದ ರೇಣುಕ ಮಹಂತ ಶಿವಾಚಾರ್ಯರು ನುಡಿ ನಮನ ಸಲ್ಲಿಸುವರು.
ಶ್ರೀ ಜಗದ್ಗುರು ರೇಣುಕಾಚಾರ್ಯ ಟ್ರಸ್ಟಿನ ಕೋಶಾಧಿಕಾರಿ ಯು.ಎಂ.ಬಸವರಾಜ್, ಮೃತ್ಯುಂಜಯ ಬೂದಿಹಾಳಮಠ, ಎಂ.ಎಸ್.ಮಹೇಶ್, ಸಿ.ವಿ.ಮಲ್ಲಿಕಾರ್ಜುನ್, ಎಸ್.ಬಿ.ಹಿರೇಮಠ, ಚಿ.ಸ. ಪ್ರಭುಲಿಂಗಶಾಸ್ತ್ರಿಗಳು ಪಾಲ್ಗೊಳ್ಳುವರು.