SSLC ಪೂರಕ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಸಿದ್ದತೆ – ಅಪರ ಜಿಲ್ಲಾಧಿಕಾರಿ ರೂಪ

0
353

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 27 ಹಾಗೂ 29 ರಂದು ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಸಿದ್ದತೆ ಸಭೆಯ ಮಾತನಾಡಿದ ಅವರು, ಚಿಕ್ಕಮಗಳುರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಭುವನೇಶ್ವರಿ ವಿದ್ಯಾರ್ಥಿ ಪ್ರೌಢಶಾಲೆ ಸೇರಿದಂತೆ 11 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ನಡೆಸಲಾಗುತ್ತದೆ ಎಂದ ಅವರು ಕೊರೊನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕರ್ತವ್ಯ ನಿರ್ವಹಿಸಬೇಕು, ಪರೀಕ್ಷೆಯು ಎರಡು ದಿನ ನಡೆಯುತ್ತಿದ್ದು ಸೆಪ್ಟೆಂಬರ್ 27 ರಂದು ಕೋರ್ ವಿಷಯಗಳಿಗೆ ಹಾಗೂ 29 ರಂದು ಭಾಷಾ ವಿಷಯಗಳಿಗೆ ಬೆಳಗ್ಗೆ 10.30 ಗಂಟೆಯಿಂದ 1.30ರ ವರೆಗೆ ನಡೆಯಲಿದೆ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯಕೆ ಹಾಜರಾಗುವ ಎಲ್ಲ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಪರೀಕ್ಷ ನಿರ್ವಾಹಣೆ ಮತ್ತು ಕೋವಿಡ್ ನಿಯಮಗಳ ನಿರ್ವಹಣೆ ಬಗ್ಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ಪ್ರವೇಶ ಪತ್ರಗಳನ್ನು ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೆನಿಂಗ್ ಸ್ಯಾನಿಟೈಸರ್ ಹಾಗೂ ಆರೋಗ್ಯ ಕೇಂದ್ರಗಳನ್ನು ತೆರೆಯುವುದರ ಜೊತೆಗೆ ಪರೀಕ್ಷಾ ಕೇಂದ್ರ ಸುತ್ತ ಭದ್ರತೆಯನ್ನು ಕೈಗೊಳ್ಳಬೇಕು ಎಂದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಹಾಗೂ ಎಲ್ಲ ಕೇಂದ್ರಗಳಿಗೆ ಜಾಗೃತಿ ದಳವನ್ನು ನೇಮಿಸಲಾಗಿದ್ದು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಯಲು ಸಂಬಂದಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಶಿಕ್ಷಣಾಧಿಕಾರಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ನೋಡಲ್ ಅಧಿಕಾರಿ ಎಂ. ಜಯಣ್ಣ, ಪೂರಕ ಪರೀಕ್ಷೆಯ ಪೂರ್ವ ತಯಾರಿ ಬಗ್ಗೆ ತೆಗೆದುಕೊಂಡು ಕ್ರಮಗಳ ಬಗ್ಗೆ ಸಭೆಯಲ್ಲಿ ವಿವರಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here