ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆ
ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು ಇಂದು ನಡೆದ ಕನ್ನಡ ಪರೀಕ್ಷೆ ಸುಸುತ್ರವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಂಡಿದೆ.
ಒಟ್ಟು ತಾಲ್ಲೂಕಿನಲ್ಲಿ 1575 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದು ಅದರಲ್ಲಿ 1566 ವಿದ್ಯಾರ್ಥಿಗಳು ಹಾಜರಾಗಿದ್ದು 9 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದಿದ್ದಾರೆ ಎಂದು ಹೊಸನಗರದ ಕ್ಷೇತ್ರ ಶಿಕ್ಷಣಾಧಿಕಾರಿ ವೈ ಗಣೇಶ್ ತಿಳಿಸಿದರು.
ತಾಲ್ಲೂಕಿನಲ್ಲಿ ದೂರದ ಊರುಗಳಿಂದ ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆಯಲು ಕಷ್ಟಕರವಾಗಲಿದೆ ಎಂದು ಅಲ್ಲಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರಗಳನ್ನು ಸಿದ್ದತೆ ಮಾಡಿಕೊಂಡಿದ್ದು ಅದರಂತೆ ಏಳು ಪರೀಕ್ಷೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜ್ ಹೊಸನಗರದಲ್ಲಿ 344 ವಿದ್ಯಾರ್ಥಿಗಳು, ಖಾಸಗಿ ಹೋಲಿ ರೆಡೀಮರ್ ಪ್ರೌಢ ಶಾಲೆಯಲ್ಲಿ 346 ವಿದ್ಯಾರ್ಥಿಗಳು, ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರೌಢ ಶಾಲೆ ವಿಭಾಗದಲ್ಲಿ 341 ವಿದ್ಯಾರ್ಥಿಗಳು, ಮೇರಿ ಮಾತ ಪ್ರೌಢ ಶಾಲೆ ರಿಪ್ಪನ್ಪೇಟೆಯಲ್ಲಿ 168 ವಿದ್ಯಾರ್ಥಿಗಳು, ನಗರ ಪ್ರೌಢ ಶಾಲೆಯಲ್ಲಿ 139 ವಿದ್ಯಾರ್ಥಿಗಳು, ಮಾರುತಿಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ 159 ವಿದ್ಯಾರ್ಥಿಗಳು, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಿಟ್ಟೂರಿನಲ್ಲಿ 110 ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ವಿಂಗಡಿಸಲಾಗಿದೆ ಎಂದರು.

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 1575 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಾಗಿದ್ದು ಒಟ್ಟು 1566 ವಿದ್ಯಾರ್ಥಿಗಳು ಕನ್ನಡ ಪರೀಕ್ಷೆಗೆ ಹಾಜರಾಗಿದ್ದು 9 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 1575 ವಿದ್ಯಾರ್ಥಿಗಳಲ್ಲಿ 793 ಬಾಲಕರು ಹಾಗೂ 782 ಬಾಲಕಿಯರು ಪರೀಕ್ಷೆಗಾಗಿ ಹೆಸರು ನೊಂದಾಯಿಸಿದ್ದಾರೆ ಎಂದು ತಿಳಿಸಿದರು.
ಹೊಸನಗರ ತಾಲ್ಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ತಹಸೀಲ್ದಾರ್ ಭರತ್ರಾಜ್ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್ ಹಾಗೂ ತಾಲ್ಲೂಕಿನ ಕೆಲವು ಅಧಿಕಾರಿಗಳು ಪರೀಕ್ಷ ಕೇಂದ್ರಗಳಿಗೆ ಭೇಟಿ ನೀಡುವುದರ ಜೊತೆಗೆ ಪರೀಕ್ಷೆ ಸುಲಲಿತವಾಗಿ ನಡೆಯಲು ಸಹಕರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ವ್ಯವಸ್ಥಾಪಕರಾದ ಗಣೇಶ್, ದೈಹಿಕ ಶಿಕ್ಷಣಾ ಇಲಾಖೆಯ ಪರಿವೀಕ್ಷಣಾಧಿಕಾರಿ ವಿನಯ್ ಕರ್ಕಿ, ಕರಿಬಸಪ್ಪ, ನೋಡಲ್ ಅಧಿಕಾರಿ ರಾಜೇಂದ್ರಪ್ಪ, ರಂಗನಾಥ್, ಸುಮಾರಾಣಿ, ವೃಥ್ವಿರಾಜ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





