ಹೊಸನಗರ

ಎಸ್‌ಎಸ್‌ಎಲ್‌ಸಿಯಲ್ಲಿ ಹೊಸನಗರ ತಾಲ್ಲೂಕಿಗೆ ಶೇ. 98.90 ಫಲಿತಾಂಶ ; ಬಿಇಒ ಗಣೇಶ್ ವೈ 

ಹೊಸನಗರ : ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಳೆದ ಸಾಲಿಗಿಂತ ಶೇ. 4.84 ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸನಗರ ತಾಲೂಕಿನ 40 ಪ್ರೌಢ ಶಾಲೆಗಳಿಂದ ಒಟ್ಟು 1546 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದೂ, 1529 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 14 ಸರ್ಕಾರಿ ಪ್ರೌಢಶಾಲೆಗಳು ಮತ್ತು 02 ಅನುದಾನಿತ ಮತ್ತು 10 ಅನುದಾನ ರಹಿತ ಶಾಲೆಗಳು 03 ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಶೇ.100 ಫಲಿತಾಂಶ ಪಡೆದುಕೊಂಡಿವೆ ಎಂದು ಹೇಳಿದರು.

ತಾಲ್ಲೂಕಿನಲ್ಲಿ ಒಟ್ಟು 1546 ವಿದ್ಯಾರ್ಥಿಗಳು  ಪರೀಕ್ಷೆ ಬರೆದಿದ್ದು, 1529 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 98.90 ರಷ್ಟು ದಾಖಲೆಯ ಫಲಿತಾಂಶ ಬಂದಿದೆ ಎಂದರು.

14 ಸರ್ಕಾರಿ ಶಾಲೆಗಳಿಗೆ ಶೇ.100 ಫಲಿತಾಂಶ :

ಜಯನಗರ, ಬೆಳ್ಳೂರು, ಹೊಸನಾಡು, ಸೊನಲೆ, ಕಾರಣಗಿರಿ, ನಗರ, ಹೆದ್ದಾರಿಪುರ, ಕಾನುಗೋಡು, ಮಸಗಲ್ಲಿ, ಕೋಡೂರು, ನಿಟ್ಟೂರು, ಸಂಪೇಕಟ್ಟೆ, ಚಿಕ್ಕಜೇನಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗ ಹೊಸನಗರ ಈ 14 ಸರ್ಕಾರಿ ಪ್ರೌಢಶಾಲೆಗಳು ಶೇ. 100 ಫಲಿತಾಂಶ ಪಡೆದಿವೆ ಎಂದು ತಿಳಿಸಿದ್ದಾರೆ.

ವಸತಿ ಶಾಲೆಗಳು ;

ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಹಿಂದುಳಿದ ವರ್ಗ) ಗೇರುಪುರ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಎಸ್‌ಸಿ) ಗೇರುಪುರ ಮತ್ತು ಶ್ರೀ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಹುಂಚ (ಯಳಗಲ್ಲು) ಶೇ.100 ಫಲಿತಾಂಶ ಪಡೆದಿವೆ.

ಅನುದಾನಿತ ಶಾಲೆಗಳು :

ನಗರ ಪ್ರೌಢಶಾಲೆ ನಗರ, ಮಲೆನಾಡು ಪ್ರೌಢಶಾಲೆ ಹೊಸನಗರ ಶೇ. 100 ಫಲಿತಾಂಶ ಪಡೆದಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅನುದಾನ ರಹಿತ ಶಾಲೆಗಳು :

ಹೋಲಿ ರೀಡಿಮರ್ ಪ್ರೌಢಶಾಲೆ ಹೊಸನಗರ, ಕುವೆಂಪು ವಿದ್ಯಾಶಾಲೆ, ಹೊಸನಗರ, ಶ್ರೀ ಗುರೂಜಿ ಪ್ರೌಢಶಾಲೆ ಹೊಸನಗರ, ಶ್ರೀರಾಮಕೃಷ್ಣ ವಿದ್ಯಾಲಯ ಹೊಸನಗರ, ಕೆಪಿಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮಾಸ್ತಿಕಟ್ಟೆ, ಶ್ರೀರಾಮಕೃಷ್ಣ ವಿದ್ಯಾ ಶಾಲೆ ಬಟ್ಟೆಮಲ್ಲಪ್ಪ, ಪ್ರಜ್ಞಾಭಾರತಿ ವಿದ್ಯಾ ಕೇಂದ್ರ ನಿಟ್ಟೂರು, ಶ್ರೀ ಬಸವೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಿಪ್ಪನ್‌ಪೇಟೆ, ಶ್ರೀ ರಾಮಕೃಷ್ಣ ವಿದ್ಯಾಲಯ ರಿಪ್ಪನ್‌ಪೇಟೆ ಮತ್ತು ಅಮೃತ ವಿದ್ಯಾಲಯಂ ನಗರ ಶೇ.100 ಫಲಿತಾಂಶ ದಾಖಲಿಸಿವೆ.

ಉಳಿದ ಎಲ್ಲಾ 11 ಶಾಲೆಗಳಿಗೆ ಶೇ. 90ಕ್ಕಿಂತ ಹೆಚ್ಚು ಫಲಿತಾಂಶ ಬಂದಿದ್ದು ಶೇ.90ಕ್ಕಿಂತ ಕಡಿಮೆ ಫಲಿತಾಂಶವನ್ನು ಯಾವುದೇ ಪ್ರೌಢಶಾಲೆಗಳು ಪಡೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಬಟ್ಟೆಮಲ್ಲಪ್ಪದ ಶ್ರೀ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿ ಜೀವನ್ ಎ 618/625 ಅಂಕ ಪಡೆದು ತಾಲೂಕಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಹೊಸನಗರ ರಾಮಕೃಷ್ಣ ವಿದ್ಯಾಲಯದ ಕು. ತೃಪ್ತಿ 613 ಅಂಕ, ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಕು. ಮಾನಸ ಆರ್ 610 ಅತಿ ಹೆಚ್ಚು ಅಂಕ ಗಳಿಸಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಹಾಗೆಯೇ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು 600 ಕ್ಕಿಂತಲೂ ಹೆಚ್ಚು ಅಂಕವನ್ನು ಗಳಿಸಿ ತಾಲೂಕಿನ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಬಿಇಒ ತಿಳಿಸಿದ್ದಾರೆ.

ಉತ್ತಮ ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರು ಹಿರಿಯ ಸಹ-ಶಿಕ್ಷಕರು, ಸಹಶಿಕ್ಷಕರು, ಎಸ್‌ಡಿಎಂಸಿ ಪದಾಧಿಕಾರಿಗಳು, ಪ್ರೌಢಶಾಲಾ ಮುಖ್ಯಶಿಕ್ಷಕರ, ಸಹಶಿಕ್ಷಕರ, ವಿಷಯವಾರು ಕ್ಲಬ್‌ಗಳ ಇತರೆ ಎಲ್ಲಾ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ, ಇಲಾಖೆಯ ಎಲ್ಲಾ ವರ್ಗದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಮತ್ತು ಪೋಷಕರು, ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ‌.

ಈ ಸುದ್ದಿಗೋಷ್ಠಿಯಲ್ಲಿ ಸಮನ್ವಯಾಧಿಕಾರಿ ರಂಗನಾಥ್ ಎಂ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಜಿ ನಾಯಕ್, ಟಿಪಿಓ ವಿನಯ್ ಹೆಗಡೆ ಕರ್ಕಿ ಮತ್ತು ಎಸ್‌ಎಸ್‌ಎಲ್‌ಸಿ ತಾಲ್ಲೂಕು ನೋಡಲ್ ಅಧಿಕಾರಿ ರಾಜೇಂದ್ರಪ್ಪ ಎಸ್ ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]