ಹೊಸನಗರ ; ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ.

ಶಿವಮೊಗ್ಗದ ನಮನ.ಕೆ., ನಿತ್ಯ ಎಂ. ಕುಲಕರ್ಣಿ ಹಾಗೂ ಸಹಿಷ್ಣು.ಎನ್ ಎಂಬ ಮೂರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿಗಳು.

ಶಿವಮೊಗ್ಗದ ಪ್ರಿಯದರ್ಶಿನಿ ಹೈಸ್ಕೂಲ್ ವಿದ್ಯಾರ್ಥಿನಿ ನಮನಾ ಕೆ., ಶಿವಮೊಗ್ಗದ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಿತ್ಯಾ.ಎಂ. ಕುಲಕರ್ಣಿ ಹಾಗೂ ಶಿವಮೊಗ್ಗದ ಆದಿಚುಂಚನಗಿರಿ ಹೈಸ್ಕೂಲ್ ವಿದ್ಯಾರ್ಥಿ ಸಹಿಷ್ಣು ಎನ್. ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು.

ಶಿವಮೊಗ್ಗ ಜಿಲ್ಲೆ ಈ ಬಾರಿಯ ಫಲಿತಾಂಶದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದೆ.