Chikkamagaluru

ವರ್ಗಾವಣೆ ಮಾಡಿದಕ್ಕೆ KSRTC ಡಿಸಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಸಿಬ್ಬಂದಿ !

CHIKKAMAGALURU ; ಕೆಎಸ್.ಆರ್.ಟಿ.ಸಿ ನೌಕರ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಕೆ.ಎಸ್‌.ಆ‌ರ್.ಟಿ.ಸಿ ಡಿಸಿಗೆ ಚಾಕು ಇರಿದಿದ್ದಾನೆ ಎನ್ನಲಾಗುತ್ತಿದೆ.

ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಮನಸೋ ಇಚ್ಚೆ ಚುಚ್ಚಿದ್ದಾನೆ. ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ನೌಕರ ರಿತೇಶ್ ನನ್ನು ಬಂಧಿಸಲಾಗಿದೆ.

ಘಟನೆ ಹಿನ್ನೆಲೆ :

ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಅಧಿಕಾರಿ ಜಗದೀಶ್ ಕುಮಾರ್ ಅವರು ರಿತೇಶ್‌ ಅವರ ಹಾಜರಾತಿ ಸರಿಯಿಲ್ಲ ಎಂದು ಕುಟುಂಬದ ಸದಸ್ಯರನ್ನ ಕರೆಸಿ ಕೌನ್ಸಿಲಿಂಗ್‌ ಮಾಡಿದ್ದಾರೆ‌ ಇದರಿಂದ ಕುಪಿತನಾಗಿ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕುಟುಂಬದವರ ಮನವಿ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆಯಾಗಿದ್ದ ರಿತೇಶ್ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಇಂದು ಏಕಾಏಕಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ರಿತೇಶ್ ನನ್ನು ಬಂಧಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]