CHIKKAMAGALURU ; ಕೆಎಸ್.ಆರ್.ಟಿ.ಸಿ ನೌಕರ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಚಾಕು ಇರಿದಿದ್ದಾನೆ ಎನ್ನಲಾಗುತ್ತಿದೆ.
ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಮನಸೋ ಇಚ್ಚೆ ಚುಚ್ಚಿದ್ದಾನೆ. ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ನೌಕರ ರಿತೇಶ್ ನನ್ನು ಬಂಧಿಸಲಾಗಿದೆ.
ಘಟನೆ ಹಿನ್ನೆಲೆ :
ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಅಧಿಕಾರಿ ಜಗದೀಶ್ ಕುಮಾರ್ ಅವರು ರಿತೇಶ್ ಅವರ ಹಾಜರಾತಿ ಸರಿಯಿಲ್ಲ ಎಂದು ಕುಟುಂಬದ ಸದಸ್ಯರನ್ನ ಕರೆಸಿ ಕೌನ್ಸಿಲಿಂಗ್ ಮಾಡಿದ್ದಾರೆ ಇದರಿಂದ ಕುಪಿತನಾಗಿ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ.

ಕುಟುಂಬದವರ ಮನವಿ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆಯಾಗಿದ್ದ ರಿತೇಶ್ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಇಂದು ಏಕಾಏಕಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ರಿತೇಶ್ ನನ್ನು ಬಂಧಿಸಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.