HOSANAGARA ; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊಸನಗರ ಶಾಖೆಯ 28 ಸ್ಥಾನಗಳಲ್ಲಿ ವಿವಿಧ ಇಲಾಖೆಯ 22 ಸ್ಥಾನಗಳಲ್ಲಿನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ 06 ಸ್ಥಾನಗಳಿಗಾಗಿ ಇಂದು ಪಟ್ಟಣದ ಶಾಸಕರ ಮಾದರಿ ಹಿರಿಯ ಹೆಣ್ಣು ಮಕ್ಕಳ ಪಾಠಶಾಲೆ ಹಾಗೂ ಬಾಲಕರ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮತದಾನ ನಡೆಯುತ್ತಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದ 03 ಸ್ಥಾನಗಳಿಗೆ ಹಾಗೂ ಬಿಸಿಎಂ ಇಲಾಖೆ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಆರೋಗ್ಯ ಇಲಾಖೆಯ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು 11 ಗಂಟೆ ವೇಳೆಗೆ ಶೇ 25 ರಷ್ಟು ಮತದಾನ ನಡೆದಿರುವುದಾಗಿ ತಿಳಿದು ಬಂದಿದೆ.

ಒಟ್ಟು 650 ಮತದಾರರು 06 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು ಸಂಜೆ 04 ಗಂಟೆಯವರೆಗೂ ಮತದಾನ ನಡೆಯಲಿದ್ದು ಸಂಜೆ 5:00 ಗಂಟೆಗೆ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.