ಶಿಕಾರಿಪುರ : ತಾಲ್ಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಶಿರಾಳಕೊಪ್ಪದ ಶ್ರೀ ಹುಚ್ಚರಾಯಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಿ.ಎಚ್. ಗಿರೀಶ್ ಅವರು 2026-27ನೇ ಸಾಲಿನ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಸೆಪ್ಟೆಂಬರ್ 27ರಂದು ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಗೌರವವನ್ನು ಸಮರ್ಪಿಸಿದೆ.
ಶಿಕ್ಷಣ ಕ್ಷೇತ್ರದ ಏಳಿಗೆ, ಸಂಘಟನಾತ್ಮಕ ಹೋರಾಟ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಗಿರೀಶ್ ಅವರು ತೋರಿದ ಕಾಳಜಿಗೆ ಈ ಪುರಸ್ಕಾರ ಸಂದಿದೆ.
ಪ್ರಶಸ್ತಿ ಪುರಸ್ಕೃತ ಗಿರೀಶ್ ಅವರಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಹಿತೈಷಿಗಳು ಶುಭ ಕೋರಿದ್ದಾರೆ.

