ಹೊಸನಗರ ; ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯವಾಗಿದ್ದು, ಮಹತ್ತರ ಸಾಧಿಸಲು ಇದು ಸಹಕಾರಿ ಆಗಲಿದೆ ಎಂದು ಎಂ. ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ತಿಳಿಸಿದರು.
ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾಕ್ಷರತಾ ಇಲಾಖೆ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಹೊಸನಗರ ವಲಯ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉದ್ದೀಪನಗೊಳಿಸುವ ಜೊತೆಗೆ ಏಕಾಗ್ರತೆ ಹೆಚ್ಚಿಸುತ್ತದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಗೆಲುವು ಸಾಧಿಸಲು ಸಾಧ್ಯವಿಲ್ಲ. ಕ್ರೀಡೆಯನ್ನು ಸ್ಪೂರ್ತಿಯಿಂದ ಸ್ವೀಕರಿಸಬೇಕೆ ವಿನಃ ಅದು ವಿದ್ಯಾರ್ಥಿಗಳ ನಡುವೆ ಪರಸ್ಪರ ದ್ವೇಷಕ್ಕೆ ನಾಂದಿ ಆಗಬಾರದು. ಕ್ರೀಡಾಪಟುಗಳಿಗೆ ಕ್ರೀಡಾಮನೋಭಾವ ಅತಿಮುಖ್ಯ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣಭಾಗದ ಕ್ರೀಡಾ ಸ್ಪರ್ಧಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರುಗಳಿಸುತ್ತಿರುವುದು ಆಶಾದಾಯಕ ಬೆಳವಣಿಗಯಾಗಿದೆ ಎಂದರು.

ಪ್ರಭಾರಿ ಬಿಇಒ ಆರ್.ಪಿ. ಚೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ ರೆಡ್ಡಿ, ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸತೀಶ್ ಕಾಲಸಸಿ, ಮುಂಬಾರು ಗ್ರಾಮ ಪಂಚಾಯತಿ ಅಧ್ಯಕ್ಷ ಎನ್. ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ಕಾರ್ಯದರ್ಶಿ ಪುಟ್ಟಸ್ವಾಮಿ ಕತ್ರಿಕೊಪ್ಪ, ಇಸಿಒ ಕರಿಬಸಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವಣ್ಯಪ್ಪ, ಸಿಆರ್‌ಪಿ ವೆಂಕಟೇಶ್, ಶಿಕ್ಷಕರಾದ ವಿ.ರಂಗಸ್ವಾಮಿ, ಲಿಲ್ಲಿ ಡಿಸೋಜಾ, ಧನಂಜಯ್, ರಾಜುರೆಡ್ಡಿ, ಸೇರಿದಂತೆ ಹಲವರು ಹಾಜರಿದ್ದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿನಯ್ ಹೆಗ್ಡೆ ಕರ್ಕಿ ಸ್ವಾಗತಿಸಿ, ಗೇರುಪುರ ಇಂದಿರಾಗಾಂಧಿ ವಸತಿಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ವಂದಿಸಿದರು.
ಬಿಲಗೋಡಿ – ತಾರನಬೈಲು ಸಂಪರ್ಕ ರಸ್ತೆ ಕುಸಿತ : ಸ್ಥಳಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ

ಹೊಸನಗರ ; ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಗ್ರಾಮದ ಸಂಪರ್ಕ ರಸ್ತೆ ಕುಸಿತ ಕಂಡ ಹಿನ್ನಲೆಯಲ್ಲಿ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಸ್ಥಳೀಯ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.