ಶಿವಮೊಗ್ಗ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ

ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ; ಮುಂಭಾಗದ ಗಾಜು ಒಡೆದು ₹20 ಸಾವಿರ ನಷ್ಟ – 6821c077 fb53 4211 b2ba 210139b88991

ಶಿವಮೊಗ್ಗ: ಶಿವಮೊಗ್ಗ–ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಬಳಿಯ ಪೆಟ್ರೋಲ್ ಬಂಕ್ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವ್ಯಕ್ತಿಯೊಬ್ಬ ಕಲ್ಲು ತೂರಿದ ಘಟನೆ ನಡೆದಿದೆ. ಕಲ್ಲು ಬಡಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದ್ದು, ಸುಮಾರು ₹20 ಸಾವಿರ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ತ್ಯಾವರೆಚಟ್ನಳ್ಳಿ ಬಳಿ ಸಾಗುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಶಿವಮೊಗ್ಗದ ರಾಗಿಗುಡ್ಡ ನಿವಾಸಿ ಪವನ್ ಎಂಬಾತ ಏಕಾಏಕಿ ಬಸ್‌ನತ್ತ ಕಲ್ಲು ಎಸೆದಿದ್ದಾನೆ ಎನ್ನಲಾಗಿದೆ.

ಕಲ್ಲು ಬಡಿದ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು, ಚಾಲಕ ಮತ್ತು ನಿರ್ವಾಹಕರು ಆತನನ್ನು ಹಿಡಿದು ವಿಚಾರಿಸಿದ್ದಾರೆ. ಈ ವೇಳೆ ಆತ ಚಾಲಕ ಹಾಗೂ ನಿರ್ವಾಹಕರಿಗೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬಸ್ ಚಾಲಕ ಶಂಕರಪ್ಪ ನೀಡಿದ ದೂರಿನ ಆಧಾರದ ಮೇಲೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650