SHIVAMOGGA ; ಕಾಲೇಜಿನಲ್ಲೇ ವಿದ್ಯಾರ್ಥಿನಿಯೊಬ್ಬಳು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ಇಂದು ನಡೆದಿದೆ.
ಮುಭಾಶಿರಾ ಬಾನು (17) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ನಂಜಪ್ಪ ಲೇಔಟ್ ಬಳಿ ಇರುವ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯು ಪ್ರಜ್ಞೆ ತಪ್ಪಿ ಹಿಮ್ಮುಖವಾಗಿ ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಓದಿದ್ದ ಪ್ರೌಢಶಾಲೆಯ ಶಿಕ್ಷಕರು ಪಿಯು ಕಾಲೇಜಿಗೆ ಆಗಮಿಸಿದ್ದರು. ಈ ವಿಷಯ ತಿಳಿದು ಅವರನ್ನು ಮಾತನಾಡಿಸಲು ವಿದ್ಯಾರ್ಥಿನಿ ತನ್ನ ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎನ್ನಲಾಗಿದೆ. ಈ ವೇಳೆ ಉಪನ್ಯಾಸಕರು, ಸಹಪಾಠಿಗಳು ಆಕೆಯ ನೆರವಿಗೆ ಧಾವಿಸಿದ್ದಾರೆ.

ಕೂಡಲೇ ಕಾಲೇಜು ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮುನ್ನವೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿನಿಗೆ ಲೋ ಬಿಪಿಯಿಂದಾಗಿ ಹೃದಯಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಕುಸಿದು ಬೀಳುವ ದೃಶ್ಯ ಕಾಲೇಜಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.