ಭದ್ರಾವತಿ

ಗಣಪತಿ ವಿಸರ್ಜನೆ ವೇಳೆ ವಿದ್ಯಾರ್ಥಿ ನೀರುಪಾಲು

ದೇವರಹಳ್ಳಿ ಕೆರೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಗಣಪತಿ ವಿಸರ್ಜನೆ ವೇಳೆ ವಿದ್ಯಾರ್ಥಿ ನೀರುಪಾಲು Bhadravati

ಭದ್ರಾವತಿ : ತಾಲೂಕಿನ ದೇವರಹಳ್ಳಿ ಕೆರೆಯಲ್ಲಿ ಗಣಪತಿ ವಿಸರ್ಜನೆ ವೇಳೆ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now

ಮೃತರನ್ನು ರಂಗನಾಥಪುರದ ನಿವಾಸಿ ಪದವಿ ವಿದ್ಯಾರ್ಥಿ ರಾಕೇಶ್ (20) ಎಂದು ಗುರುತಿಸಲಾಗಿದೆ. ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಉತ್ಸವದಲ್ಲಿ ಭಾಗಿಯಾಗಿದ್ದ ಇವರು, ಭಾನುವಾರ ಸಂಜೆ ಹೊರಟ ಮೆರವಣಿಗೆಯೊಂದಿಗೆ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ದೇವರಹಳ್ಳಿ ಕೆರೆಯ ಬಳಿಗೆ ತಲುಪಿದ್ದರು.

ಮೂರ್ತಿಯನ್ನು ನೀರಿಗೆ ವಿಸರ್ಜಿಸುವ ಸಮಯದಲ್ಲೇ ರಾಕೇಶ್ ಕೆರೆಯ ನೀರಿನಲ್ಲಿ ಮುಳುಗಿದ್ದನು. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ರಾತ್ರಿಯಿಡೀ ಸುದೀರ್ಘ ಶೋಧ ಕಾರ್ಯಾಚರಣೆ ನಡೆಸಿದರಾದರೂ, ಸೋಮವಾರ ಬೆಳಿಗ್ಗೆಯಷ್ಟೇ ಅವರ ಮೃತದೇಹ ಪತ್ತೆಯಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶವಪರೀಕ್ಷೆಯ ನಂತರ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]