Chikkamagaluru

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು !

ಕೊಪ್ಪ ; ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದ್ದು, ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಇಂದು ಬೆಳಗಿನಜಾವ ವಿದ್ಯಾರ್ಥಿಗಳು ಎದ್ದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶನಿವಾರ ಎಂದಿನಂತೆ ಎಲ್ಲರೊಂದಿಗೆ ಸಾಮಾನ್ಯವಾಗಿದ್ದ ಶಮಿತಾ ರಾತ್ರಿ ವೇಳೆ ವಸತಿ ಶಾಲೆಯ ಕೊಠಡಿಯ ಸಹಪಾಠಿಗಳು ನಿದ್ದೆಗೆ ಜಾರಿದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶಮಿತಾ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ವ್ಯಾಸಂಗ ಮಾಡುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>